Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
Last updated: February 20, 2026 10:21 pm
Public TV
Share
4 Min Read
Siddaramaiah 10
SHARE

– ರಣರಂಗ ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ
– ರಾಹುಲ್ ಗಾಂಧಿಯವರ ವಿರುದ್ಧವೂ ಸಂಚು ಅಂತ ಆಕ್ರೊಶ

ಬೆಂಗಳೂರು: ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜಕೀಯ ವಿರೋಧಿಗಳ ವಿರುದ್ಧ ಸಿಡಿದಿದ್ದಾರೆ.

ಎಕ್ಸ್‌ನಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಸಿಎಂ, ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಆಧಾರರಹಿತ ಆರೋಪ ಮಾಡಿ ಅವಮಾನಿಸಿದ್ದರೆ ಸ್ನೇಹಮಯಿ ವಿರುದ್ಧ ಕ್ರಮ ಆಗ್ಬೇಕು: ಯತೀಂದ್ರ ಸಿದ್ದರಾಮಯ್ಯ

“ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ”

ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ… pic.twitter.com/AwrvtGTmrW

— Siddaramaiah (@siddaramaiah) February 20, 2026

ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ. ಇದನ್ನೂ ಓದಿ: ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ – ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಯಾಕೆ ಹೀಗಾಗುತ್ತೆ: ಜೋಶಿ ಪ್ರಶ್ನೆ

“ಸಾಮಾಜಿಕ ನ್ಯಾಯದ ಪರ ನಿಂತಿರುವುದೇ ರಾಹುಲ್ ವಿರುದ್ಧದ ಸಂಚುಗಳಿಗೆ ಕಾರಣ”

ಈಗ ರಾಹುಲ್ ಗಾಂಧಿಯವರ ವಿರುದ್ಧವೂ ಸಂಚು ನಡೆಯುತ್ತಿದೆ. ಯಾವಾಗ ರಾಹುಲ್ ಗಾಂಧಿಯವರು ಜಾತಿ, ಮತ, ಪಂಥ, ವರ್ಗವನ್ನು ಮೀರಿ ಎಲ್ಲ ಭಾರತೀಯರನ್ನು ಜೋಡಿಸುವ ಕೆಲಸ ಶುರು ಮಾಡಿದರೋ, ಯಾವಾಗ ಅವರು ಸಾಮಾಜಿಕ ನ್ಯಾಯದ ಪ್ರಶ್ನೆಗಳನ್ನು ಎತ್ತಲು ಶುರುಮಾಡಿದರೋ, ಯಾವಾಗ ಅವರು… pic.twitter.com/q7OZZFAIh8

— Siddaramaiah (@siddaramaiah) February 20, 2026

ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು-ಒಳಸಂಚುಗಳು ನಡೆಯುತ್ತಲೇ ಬಂದಿದೆ. ಬಸವಣ್ಣ ಏನು ತಪ್ಪು ಮಾಡಿದ್ದರು? ಜಾತಿ ವಿನಾಶಕ್ಕೆ ಪ್ರಯತ್ನ ಮಾಡಿದ್ದರು, ಅಂತರಜಾತಿ ಮದುವೆ ಮಾಡಿಸಿದ್ದರು, ಅವಕಾಶ ವಂಚಿತ ತಬ್ಬಲಿ ಜಾತಿಗಳಿಗೆ ಸ್ವಾಭಿಮಾನದ ದೀಕ್ಷೆ ಕೊಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದರು. ಈ ಕಾರಣಕ್ಕಾಗಿ ಅವರನ್ನು ವ್ಯವಸ್ಥಿತ ಸಂಚಿನ ಮೂಲಕ ಮುಗಿಸಲಾಯಿತು.

“ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವ ವರೆಗೆ ಹೋರಾಡುತ್ತೇನೆ”

ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ… pic.twitter.com/rA8XGFuuZL

— Siddaramaiah (@siddaramaiah) February 20, 2026

ರಾಹುಲ್ ಗಾಂಧಿಯವರ ವಿರುದ್ಧವೂ ಸಂಚು
ಈಗ ರಾಹುಲ್ ಗಾಂಧಿಯವರ ವಿರುದ್ಧವೂ ಸಂಚು ನಡೆಯುತ್ತಿದೆ. ಯಾವಾಗ ರಾಹುಲ್ ಗಾಂಧಿಯವರು ಜಾತಿ, ಮತ, ಪಂಥ, ವರ್ಗವನ್ನು ಮೀರಿ ಎಲ್ಲ ಭಾರತೀಯರನ್ನು ಜೋಡಿಸುವ ಕೆಲಸ ಶುರು ಮಾಡಿದರೋ, ಯಾವಾಗ ಅವರು ಸಾಮಾಜಿಕ ನ್ಯಾಯದ ಪ್ರಶ್ನೆಗಳನ್ನು ಎತ್ತಲು ಶುರುಮಾಡಿದರೋ, ಯಾವಾಗ ಅವರು ಜಾತಿಗಣತಿ ಬಗ್ಗೆ, ಮೀಸಲಾತಿ ಹೆಚ್ಚಳದ ಬಗ್ಗೆ ದನಿ ಎತ್ತಲು ಪ್ರಾರಂಭಿಸಿದರೋ ಅಂದಿನಿಂದ ಅವರನ್ನು ಹಣಿಯುವ ಕೆಲಸ ಜೋರಾಗಿ ನಡೆಯುತ್ತಿದೆ.

ಕಾಲ ಬದಲಾಗಿದೆ, ನಾವು ಮನುವಿನ ಕಾಲದಲ್ಲಿಯೂ ಇಲ್ಲ, ರಾಜ-ಮಹಾರಾಜರ ಗುಲಾಮರೂ ಅಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ನಮಗಿರುವ ದೊಡ್ಡ ರಕ್ಷಣೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ. ಇದನ್ನೂ ಓದಿ: ಬಾಕಿ ಬಿಲ್​ 37,000 ಕೋಟಿ ಬಿಡುಗಡೆಗೆ ಆಗ್ರಹ – ಮಾ.6 ರಂದು ಬೆಂಗಳೂರಲ್ಲಿ ಮುಷ್ಕರಕ್ಕೆ ಗುತ್ತಿಗೆದಾರರ ಸಂಘ ಕರೆ

Rahul Gandhi 1

ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ
ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ.

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವ ವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಬರೆದುಕೊಂಡಿದ್ದಾರೆ.

TAGGED:bjpcongressRahul Gandhisiddaramaiahಕಾಂಗ್ರೆಸ್ಬಿಜೆಪಿರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
58 seconds ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
9 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
18 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
24 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
51 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?