ಬೆಳಗಾವಿ: `ಅವನೊಬ್ಬ ಮೂರ್ಖ’ ಅಂತ ಏಕವಚನದಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ (Anant Kumar Hegade) ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಕ್ರಾತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ರಾಯಣ್ಣನ ದೇಶಪ್ರೇಮ, ದೇಶಭಕ್ತಿ ಬೆಳೆಸಿಕೊಳ್ಳಬೇಕು. ಪರಸ್ಪರರು ದ್ವೇಷ ಮಾಡಬಾರದು, ಪ್ರೀತಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಅವನೊಬ್ಬ ಮೂರ್ಖ ಮಸೀದಿ ದ್ವಂಸಗೊಳಿಸಿ ದೇವಸ್ಥಾನ ಕಟ್ಟಿಸುವುದಾಗಿ ಹೇಳಿಕೆ ನೀಡಿದ್ದಾನೆ. ಈ ಹಿಂದೆ ಆದ ಸಣ್ಣ ತಪ್ಪಿನಿಂದ ಆಗಿದ್ದನ್ನೇ ಈಗ ಕೆದಕುತ್ತಿದ್ದಾರೆ. ಇಂತಹ ಮೂರ್ಖರಿಗೆ ಜನರು ಚಪ್ಪಾಳೆ ತಟ್ಟುತ್ತಾರೆ, ಆದರೆ ಇಂಥವರಿಗೆ ಚಪ್ಪಾಳೆ ತಟ್ಟಬಾರದು ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಗ್ಯಾರಂಟಿ ಯೋಜನೆ ಜಾರಿಯಾಗಲ್ಲ ಎಂದಿದ್ರು, ನಾವು ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯ ಆರ್ಥಿಕವಾಗಿಯೂ ಸದೃಢವಾಗಿದೆ. ಗ್ಯಾರಂಟಿ ಯೋಜನೆ ಜಾರಿ ಜೊತೆಗೆ ರಾಜ್ಯದ ಅಭಿವೃದ್ಧಿಯನ್ನೂ ಮಾಡುತ್ತೇವೆ ಎಂದು ಹೇಳುವ ಮೂಲಕ ರಾಜ್ಯ ದಿವಾಳಿ ಆಗಿದೆ ಎನ್ನುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್ ಅಗ್ನಿಗಾಹುತಿ!
Advertisement
Advertisement
ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎಲ್ಲ ಧರ್ಮಿಯರಿಗೂ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ನಂದಗಡದ ಮ್ಯೂಸಿಯಂ ನಿರ್ಮಾಣಕ್ಕೆ ಕೂಡ ಶೀಘ್ರವೇ ಆದ್ಯತೆ ನೀಡುತ್ತೇವೆ ಎಂದರು.