ಬೆಂಗಳೂರು: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಎರಡು ಖಾತೆಗಳನ್ನ ತಮ್ಮ ಬಳಿಯೇ ಇಟ್ಟುಕೊಂಡಿರುವ ಸಿಎಂ ಸಿದ್ದರಾಮಯ್ಯ ಇಂದು ಸಭೆ ನಡೆಸಿದ್ರು. ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಸಿಎಂ ಸಭೆ ನಡೆಸಿದ್ರು. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಎರಡು ಇಲಾಖೆಗಳು ಸಿಎಂ ಸಿದ್ದರಾಮಯ್ಯ ಬಳಿಯೇ ಇವೆ.
ಇಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಪ್ರಮುಖ ಸಲಹೆ – ಸೂಚನೆಗಳನ್ನು ನೀಡಿದೆ.
ಸಭೆಯ ಮುಖ್ಯಾಂಶಗಳು ಹೀಗಿವೆ#ಪ್ರಗತಿಪರಿಶೀಲನಾಸಭೆ pic.twitter.com/5mlReuIoEr
— Siddaramaiah (@siddaramaiah) June 18, 2024
Advertisement
ಸಭೆಯಲ್ಲಿ ಗರಂ ಆಗಿದ್ದ ಸಿಎಂ ಸಿದ್ದರಾಮಯ್ಯ (Siddaramaiah), ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ್ರು. ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಸಿಎಂ, ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ? ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ರು. ಅಲ್ಲದೆ ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಲು ಸಿಎಂ ಸೂಚಿಸಿದ್ರು.
Advertisement
Advertisement
ಎಸ್.ಎಸ್.ಎಲ್.ಸಿ. ಯಲ್ಲಿ 77 % ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಬೇಕು. ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಸಿಎಂ ಸೂಚಿಸಿದ್ರು. ಅಲ್ಲದೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಇಲಾಖೆಯ ಸೂಚನೆಯಂತೆ 2023-24 ರಲ್ಲಿ ಲಭ್ಯವಿದ್ದ 263 ಕೋಟಿ ರೂ. ಖಜಾನೆಗೆ ಜಮಾ ಮಾಡಲಾಗಿದೆ. ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಾಗಿಲ್ಲ. ಪ್ರತಿ ವರ್ಷ ಮಾಡಬೇಕಲ್ಲ. ಯಾಕೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ರು.
Advertisement
ಈ ವೇಳೆ ಶಾಸಕರು ಫಲಾನುಭವಿಗಳ ಪಟ್ಟಿ ನೀಡಿಲ್ಲ ಎಂದು ಅಧಿಕಾರಿಗಳ ಸ್ಪಷ್ಟನೆ ನೀಡಿದ್ರು. ಆಯ್ಕೆ ಮಾಡಬೇಕಾದ ಫಲಾನುಭವಿಗಳ ಸಂಖ್ಯೆ ಅತ್ಯಂತ ಕಡಿಮೆ ಇರುವುದರಿಂದ ಸಂದಿಗ್ಧ ಪರಿಸ್ಥಿತಿ ಎದುರಾಗುವ ಹಿನ್ನೆಲೆಯಲ್ಲಿ ಶಾಸಕರು ಆಯ್ಕೆ ಮಾಡಲು ಆಸಕ್ತಿ ತೋರಿಸುತ್ತಿಲ್ಲ, ಫಲಾನುಭವಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.