Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯತ್ನಾಳ್ ನಿಜವಾದ ಗುರಿ ಮೋದಿ ಅನ್ನೋದು ನಿಧಾನವಾಗಿ ಬಯಲಾಗಿದೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯತ್ನಾಳ್ ನಿಜವಾದ ಗುರಿ ಮೋದಿ ಅನ್ನೋದು ನಿಧಾನವಾಗಿ ಬಯಲಾಗಿದೆ: ಸಿದ್ದರಾಮಯ್ಯ

Bengaluru City

ಯತ್ನಾಳ್ ನಿಜವಾದ ಗುರಿ ಮೋದಿ ಅನ್ನೋದು ನಿಧಾನವಾಗಿ ಬಯಲಾಗಿದೆ: ಸಿದ್ದರಾಮಯ್ಯ

Public TV
Last updated: December 8, 2023 2:26 pm
Public TV
Share
3 Min Read
MODI SIDDARAMAIAH
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಡುವಿನ ಜಟಾಪಟಿ ಜೋರಾಗಿದೆ.

ಈ ಸಂಬಂಧ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಸರಣಿಯಾಗಿ ಬರೆದುಕೊಂಡಿದ್ದು, ಯತ್ನಾಳ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯತ್ನಾಳ್ ನಿಜವಾದ ಗುರಿ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಯತ್ನಾಳ್ ಅತ್ಯಂತ ಆತ್ಮೀಯರು. ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್‍ಗೆ ಇದು ತಿಳಿದಿರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಯತ್ನಾಳ್ ಕೆರಳಿ ಕೆಂಡವಾಗಿದ್ದಾರೆ ಎಂದಿದ್ದಾರೆ.

ರಾಜ್ಯ @BJP4Karnataka ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ @BasanagoudaBJP ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ @narendramodi ಮತ್ತು @AmitShah ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ… pic.twitter.com/kE8mykUCQ9

— Siddaramaiah (@siddaramaiah) December 8, 2023

ಮೋದಿ (Narendra Modi), ಅಮಿತ್ ಶಾ (Amitshah) ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ. ಇದನ್ನೂ ಓದಿ: ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್‌ ಹಗರಣ – ಸದನದಲ್ಲಿ ಯತ್ನಾಳ್‌ ಬಾಂಬ್‌

BASANAGOUDA PATIL YATNAL

ಎಕ್ಸ್ ನಲ್ಲಿ ಏನಿದೆ..?: ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೋವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ. ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಫೋಟೋಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ?

ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು @BJP4Karnataka ಶಾಸಕ @BasanagoudaBJP ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ @narendramodi ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ.

ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ… pic.twitter.com/T9izcas6I9

— Siddaramaiah (@siddaramaiah) December 8, 2023

ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ.

ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು.

ಶಾಸಕ @BasanagoudaBJP ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ @BSYBJP ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ… pic.twitter.com/HNuPGGmQgT

— Siddaramaiah (@siddaramaiah) December 8, 2023

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ ‘ಜೀ” ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ.

ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ, ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು.

TAGGED:Basanagouda Patil Yatnalbengalurusiddaramaiahಬಸನಗೌಡ ಪಾಟೀಲ್ ಯತ್ನಾಳ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
8 minutes ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
25 minutes ago
Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
1 hour ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
1 hour ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
2 hours ago
naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?