Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ ಸಿದ್ದರಾಮಯ್ಯ – ಕೇಂದ್ರ ನೆರವಿಗೆ ಬರುವಂತೆ ಮೋದಿಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ ಸಿದ್ದರಾಮಯ್ಯ – ಕೇಂದ್ರ ನೆರವಿಗೆ ಬರುವಂತೆ ಮೋದಿಗೆ ಪತ್ರ

Belgaum

ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ ಸಿದ್ದರಾಮಯ್ಯ – ಕೇಂದ್ರ ನೆರವಿಗೆ ಬರುವಂತೆ ಮೋದಿಗೆ ಪತ್ರ

Public TV
Last updated: November 7, 2025 8:53 am
Public TV
Share
3 Min Read
siddaramaiah narendramodi delhi 2
SHARE

ಬೆಂಗಳೂರು: ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ (Farmer Protest) ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದ್ರೂ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಹೀಗಾಗಿ ಈ ಕಬ್ಬಿನ ಕಿಚ್ಚು ಆರಿಸಲು ಸ್ವತಃ ಸಿಎಂ ಸಿದ್ದರಾಮಯ್ಯ (Siddaramaiah) ಅವರೇ ಪ್ರವೇಶಿಸಿದ್ದಾರೆ.

North Karnataka’s sugarcane farmers are in distress. Despite our best efforts, the issue demands Central intervention.

I have sought an urgent meeting with Hon’ble Prime Minister Shri @narendramodi to resolve the crisis in the interest of our farmers and rural economy.

I am… pic.twitter.com/HMbuX9mZOA

— Siddaramaiah (@siddaramaiah) November 6, 2025

ರೈತರ ಈ ಹೋರಾಟದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪತ್ರ ಬರೆದಿದ್ದಾರೆ. ಬೆಳಗಾವಿ (Belagavi), ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಗಂಭೀರ ಸಮಸ್ಯೆ ಬಗ್ಗೆ ನಿಮ್ಮೊಂದಿಗೆ ಚರ್ಚಿಸಲು ತುರ್ತು ಅವಕಾಶ ಕೋರಿ ಪತ್ರ ಬರೆಯುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ ಎಂದವರು ಈಗ ಕೇಂದ್ರವನ್ನು ದೂರೋದು ಯಾಕೆ? – ಸಿಎಂ ವಿರುದ್ಧ ಅಶೋಕ್‌ ಕಿಡಿ

Belagavi Farmers Protest HK Patil Meeting

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸಂಧಾನಕ್ಕೆ ರಾಜ್ಯ ಸರ್ಕಾರ ನಿರಂತರ ಪ್ರಯತ್ನಿಸಿದರೂ ಹೋರಾಟ ತೀವ್ರಗೊಂಡಿದೆ. ಕಟಾವು ಮತ್ತು ಸಾರಿಗೆ ವೆಚ್ಚಗಳನ್ನು ಕಡಿತಗೊಳಿಸಿದ ನಂತರ ರೈತರಿಗೆ ಸಿಗುವ ಲಾಭ ಕಡಿಮೆ. ಪ್ರತಿ ಟನ್‌ಗೆ 800 ರಿಂದ 900 ರೂ. ವರೆಗೆ ವೆಚ್ಚ ಇರುತ್ತದೆ. ರೈತನಿಗೆ ತಲುಪುವ ಹಣ ಕೇವಲ ಪ್ರತಿ ಟನ್‌ಗೆ 2,600 ರಿಂದ 3 ಸಾವಿರ ರೂ. ಮಾತ್ರ. ಹೀಗಾಗಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಕಾರಿಗೆ ಚಪ್ಪಲಿ ಎಸೆದ ರೈತರು

sugarcane farmers protest

ರಾಜ್ಯ ಸರ್ಕಾರ ಸರ್ಕಾರ ರೈತರ ಹೋರಾಟವನ್ನು ಶಮನಗೊಳಿಸಲು ಈಗಾಗಲೇ ತೊಡಗಿಸಿಕೊಂಡಿದೆ, ಎಲ್ಲಾ ಪಾಲುದಾರರೊಂದಿಗೆ ಹಲವಾರು ಸುತ್ತಿನ ಚರ್ಚೆಗಳನ್ನೂ ನಡೆಸಲಾಗಿದೆ. ಜಿಲ್ಲಾಧಿಕಾರಿ ಸಕ್ಕರೆ ಕಾರ್ಖಾನೆಗಳು 11.25% ವಸೂಲಾತಿ ದರದಲ್ಲಿ ಪ್ರತಿ ಟನ್‌ಗೆ 3,200 ರೂ. ಮತ್ತು 10.25% ವಸೂಲಾತಿ ದರದಲ್ಲಿ ಪ್ರತಿ ಟನ್‌ಗೆ 3,100 ರೂ. ಪಾವತಿಸುವಂತೆ ಸೂಚಿಸಿದ್ದಾರೆ. ಇದರಲ್ಲಿ ಕೊಯ್ಲು ಮತ್ತು ಸಾರಿಗೆ ಶುಲ್ಕಗಳು (H&T) ಸೇರಿವೆ. ನಾವು ಡಿಜಿಟಲ್ ತೂಕದ ವ್ಯವಸ್ಥೆಯನ್ನ ಪರಿಚಯಿಸಿದ್ದು, ವಸೂಲಾತಿ, ತೂಕ, ಕಡಿತ ಮತ್ತು ಪಾವತಿಗಳನ್ನ ಮೇಲ್ವಿಚಾರಣೆ ಮಾಡಲು ಸಮಿತಿಗಳನ್ನೂ ರಚಿಸಿದ್ದೇವೆ. ರೈತರ ಹಿತಾಸಕ್ತಿಗಳನ್ನು ರಕ್ಷಿಸಲು APMC ಕೇಂದ್ರಗಳಲ್ಲಿ ಉಚಿತ ತೂಕದ ಯಂತ್ರಗಳನ್ನೂ ಒದಗಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಟ್ಟ ಅರಣ್ಯದಲ್ಲಿ ಕಳೆದು ಹೋಗಿದ್ದ 75ರ ವೈದ್ಯನನ್ನು ಪತ್ತೆ ಮಾಡಿದ ಪೊಲೀಸ್‌ ಡಾಗ್‌

ಈ ಕ್ರಮಗಳ ಹೊರತಾಗಿಯೂ, ರೈತರು ಅತೃಪ್ತರಾಗಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೆದ್ದಾರಿ ತಡೆ ಮತ್ತು ಇತರ ಹೋರಾಟಗಳಿಗೆ ಮುಂದಾಗುವುದಾಗಿ ಬೆದರಿಕೆ ಹಾಕಿದ್ದಾರೆ. 2025-26ರ ಋತುವಿನಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿದ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) 10.25% ಮೂಲ ವಸೂಲಾತಿ ದರಕ್ಕೆ ಕ್ವಿಂಟಲ್‌ಗೆ 2,355 (ಪ್ರತಿ ಟನ್‌ಗೆ 23,550) ಆಗಿದೆ. ಆದಾಗ್ಯೂ, ಕಡ್ಡಾಯ ಕೊಯ್ಲು ಮತ್ತು ಸಾರಿಗೆ ವೆಚ್ಚವನ್ನು ಪ್ರತಿ ಟನ್‌ಗೆ 800 ರೂ. ರಿಂದ 900 ರೂ. ವರೆಗೆ ಕಡಿತಗೊಳಿಸಿದ ನಂತರ, ರೈತನಿಗೆ ತಲುಪುವ ಪರಿಣಾಮಕಾರಿ ಪಾವತಿ ಪ್ರತಿ ಟನ್‌ಗೆ 2,600- 3,000 ಮಾತ್ರ ಆಗಿ. ಆದಾಗ್ಯೂ, ರಸಗೊಬ್ಬರ, ಕಾರ್ಮಿಕ, ನೀರಾವರಿ ಮತ್ತು ಸಾರಿಗೆ ವೆಚ್ಚಗಳಲ್ಲಿನ ತೀವ್ರ ಏರಿಕೆಯಿಂದಾಗಿ, ಈ ಬೆಲೆ ನಿಗದಿಯು ಕಬ್ಬು ಕೃಷಿಯನ್ನ ಆರ್ಥಿಕವಾಗಿ ಸಮರ್ಥನೀಯವಲ್ಲದಂತೆ ಮಾಡಿದೆ ಆದ್ದರಿಂದ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

TAGGED:narendra modinorth karnatakasiddaramaiahSugarcane Farmersಕಬ್ಬು ಬೆಳೆಗಾರರುನರೇಂದ್ರ ಮೋದಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
1 hour ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
2 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
2 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
4 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
4 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?