ಬೆಂಗಳೂರು: ಚುನಾವಣಾ ಸಮಯದಲ್ಲೇ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಈ ಗಿಫ್ಟ್ ಮೂಲಕ ರಾಜ್ಯದಲ್ಲಿರೋ ಸರ್ಕಾರಿ ನೌಕರರ ಜೊತೆ ಅವರ ಕುಟುಂಬದವರ ಮತವನ್ನು ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿದೆ.
Advertisement
ಇನ್ನೇನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರೋ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿರೋ 5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಓಟ್ ಬ್ಯಾಂಕ್ ಸೆಳೆಯೋ ಸಲುವಾಗಿ ನಿವೃತ್ತಿ ವಯಸ್ಸನ್ನು ರಾಜ್ಯ ಸರ್ಕಾರ 2 ವರ್ಷ ಹೆಚ್ಚಿಸಲು ಮುಂದಾಗಿದೆ. ಈಗಿರುವ 60 ರ ಬದಲಾಗಿ ಇನ್ನೆರಡು ವರ್ಷ ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ. ಅಂದ್ರೆ ಇನ್ನು ಮುಂದೆ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62 ಆಗಲಿದೆ.
Advertisement
Advertisement
ಈ ಬಗ್ಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರೋ ಸಿಎಂ, ಮುಂಬರುವ ಬಜೆಟ್‍ನಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇವೆ ಅಂತ ಅಧ್ಯಕ್ಷರಿಗೆ ಭರವಸೆ ನೀಡಿದ್ದಾರಂತೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರಿ ನೌಕರರ ಸಂಘದ ಇತರೆ ಬೇಡಿಕೆಗಳಿಗಳಿಗೂ ಅಸ್ತು ಅಂದಿರೋ ಸಿದ್ದರಾಮಯ್ಯ, ಜನವರಿ 18 ರಂದು ಕೈಗೊಂಡಿದ್ದ ಮುಷ್ಕರವನ್ನು ಕೈಬಿಡಬೇಕು ಅಂತ ಮನವಿ ಮಾಡಿದ್ದಾರೆ ಎನ್ನಲಾಗಿದೆ.