ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

Public TV
2 Min Read
siddaramaiah chamundeshwari temple

– ಈಡುಗಾಯಿ ಒಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣ (MUDA Scam) ಸಂಕಷ್ಟದ ನಡುವೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಮೈಸೂರಿಗೆ ಮಂಗಳವಾರ ಭೇಟಿ ನೀಡಿದ ಸಿಎಂ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚಾಮುಂಡಿಬೆಟ್ಟಕ್ಕೆ (Chamundeshwari Temple) ಸಿಎಂ ಭೇಟಿ ಹಿನ್ನೆಲೆ ಬೆಟ್ಟದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ದೇವಾಲಯ ಮುಂಭಾಗ ಯಾರೂ ಓಡಾಡದಂತೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಭದ್ರತೆಗೆಗಾಗಿ ಬೆಟ್ಟದಲ್ಲಿ ಸಾಕಷ್ಟು ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದಾರೆ: ಪ್ರದೀಪ್ ಈಶ್ವರ್ ಕಿಡಿ

siddaramaiah chamundeshwari temple 1

ಚಾಮುಂಡಿ ಬೆಟ್ಟಕ್ಕೆ ಸಿಎಂ ಬರುತ್ತಿದ್ದಂತೆ ದೇವಸ್ಥಾನ ಆಡಳಿತ ಮಂಡಳಿ, ಮಂಗಳವಾದ್ಯಗಳ ಮೂಲಕ ಸ್ವಾಗತ ಕೋರಿತು. ಈ ವೇಳೆ ಸಿಎಂಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್ ಸಾಥ್ ನೀಡಿದರು.

ಬಳಿಕ ಸಿಎಂ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. 23 ದಿನಗಳಲ್ಲಿ ಎರಡನೇ ಬಾರಿಗೆ ಚಾಮುಂಡಿ ದರ್ಶನ ಮಾಡಿದರು. ಈಡುಗಾಯಿ ಒಡೆದು ನಾಡದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತಂದೆ ಜೊತೆ ಆಗಮಿಸಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ

siddaramaiah chamundeshwari temple 2

ಸಿದ್ದರಾಮಯ್ಯ ಹೆಸರಿನಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಸಿದ್ದರಾಮಯ್ಯಗೆ ಮಂಗಳಾರತಿ ಕೊಡಲಾಯಿತು. ಸಿದ್ದರಾಮಯ್ಯ ಹಣೆಗೆ ಅರ್ಚಕರು ಕುಂಕುಮ ಇಟ್ಟರು. ಬಳಿಕ ಚಾಮುಂಡೇಶ್ವರಿ ಪಾದುಕೆಗೆ ಸಿಎಂ ನಮಸ್ಕರಿಸಿ ಭಕ್ತಿಯಿಂದ ಪ್ರಾರ್ಥಿಸಿದರು. ನಂತರ ಗಣಪತಿ, ಆಂಜನೇಯ ಸೇರಿದಂತೆ ಇತರ ದೇವರಲ್ಲೂ ಪ್ರಾರ್ಥನೆ ಮಾಡಿದರು. ಬಳಿಕ ದೇವಿಗೆ ಈಡುಗಾಯಿ ಹೊಡೆದ ಸಿದ್ದರಾಮಯ್ಯ.

ಚಾಮುಂಡೇಶ್ವರಿ ಪ್ರಸಾದ ಪಡೆಯದ ಮಹದೇವಪ್ಪ:
ಸಿಎಂ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಹೆಚ್.ಸಿ.ಮಹದೇವಪ್ಪ ಪ್ರಸಾದ ಸ್ವೀಕರಿಸದ ಘಟನೆ ನಡೆಯಿತು. ಚಾಮುಂಡೇಶ್ವರಿ ದೇವಿಯ ಕುಂಕುಮ ಹಾಗೂ ಹೂವನ್ನು ಸಿಎಂ ಪ್ರಸಾದವಾಗಿ ಪಡೆದರು. ಈ ವೇಳೆ ಮಹದೇವಪ್ಪಗೂ ಪ್ರಸಾದ ನೀಡಲು ಅರ್ಚಕರು ಮುಂದಾದರು. ಆಗ ಕೈ ಸನ್ನೆಯಲ್ಲೇ ನನಗೆ ಬೇಡಾ ಎಂದು ಸಚಿವರು ಹೇಳಿದರು.

Share This Article