ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನಮ್ಮ ನಡುವೆ ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಪವರ್ ಶೇರಿಂಗ್ ವಿಚಾರವಾಗಿ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಡಿಕೆಶಿ ನೀಡಿದ್ದ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ನೀಡಿದರು. ನಮ್ಮಿಬ್ಬರ ನಡುವೆ ಯಾವುದೇ ಒಪ್ಪಂದ ಆಗಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದರಂತೆ ನಡೆದುಕೊಳ್ಳೋದು ಎಂದು ತಿಳಿಸಿದರು.
Advertisement
ಸಚಿವ ಸಂಪುಟ ಪುನಾರಚನೆ ಕುರಿತು ಮಾತನಾಡಿ, ಸದ್ಯಕ್ಕೆ ಸಚಿವ ಸಂಪುಟ ಪುರ್ನರಚನೆ ಆಗಲ್ಲ. ನಾನು ಇದುವರೆಗೆ ಹೇಳಿಲ್ಲ. ಯಾರು ಹೇಳ್ತಾರೆ ಅನ್ನೋದು ಮುಖ್ಯವಲ್ಲ. ಹೈಕಮಾಂಡ್ ಸೂಚನೆ ನೀಡಬೇಕು. ಆ ಬಳಿಕ ನಾನು ನಿರ್ಧಾರ ಮಾಡಬೇಕು. ಹೈಕಮಾಂಡ್ ಹೇಳಿಯೂ ಇಲ್ಲ, ನಾನು ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದರು.