ಬೆಂಗಳೂರು: ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ನಿರ್ಮಾಣಗೊಂಡಿದ್ದ ಪರಶುರಾಮ ಥೀಮ್ ಪಾರ್ಕ್ (Shri Parashurama Theme Park) ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ (CID) ಒಪ್ಪಿಸಿದೆ.
ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ (Sunil Kumar) ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿದ್ದರು. ಕಾಮಗಾರಿ ಪೂರ್ಣಗೊಳ್ಳದೇ ಈ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ (Congress) ಆರೋಪಿಸಿತ್ತು. ಇದನ್ನೂ ಓದಿ: ಮೋದಿ ಒಬಿಸಿಯಲ್ಲಿ ಹುಟ್ಟಿಲ್ಲ, ಜನರ ದಾರಿ ತಪ್ಪಿಸುತ್ತಿದ್ದಾರೆ: ರಾಹುಲ್ ಗಾಂಧಿ
Advertisement
Advertisement
ಈ ಸಂಬಂಧ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
Advertisement
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೂತನ ಥೀಂ ಪಾರ್ಕ್ ಲೋಕಾರ್ಪಣೆ ಮಾಡಿದ್ದರು. ವಿಧಾನ ಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗ ಥೀಂ ಪಾರ್ಕ್ ಉದ್ಘಾಟನೆ ಶಾಸಕರಿಗೆ ಭಾರೀ ಯಶಸ್ಸು ತಂದುಕೊಟ್ಟಿತ್ತು.ಇದನ್ನೂ ಓದಿ: ಕೊರಗಜ್ಜನ ಆಶೀರ್ವಾದ ಪಡೆದ ‘ಕಾಟೇರ’ ಡೈರೆಕ್ಟರ್ ತರುಣ್
Advertisement
ಉದ್ಘಾಟನೆಯಾದ ಬಳಿಕ ಸಿಡಿಲು ನಿರೋಧಕ ಅಳವಡಿಕೆ ಮತ್ತು ಇನ್ನಿತರ ಬಾಕಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಥೀಂ ಪಾರ್ಕ್ ಬಂದ್ ಮಾಡಿರುವ ವಿಚಾರವಾಗಿ, ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಪರಶುರಾಮನ ಮೂರ್ತಿ ನಕಲಿ ಎನ್ನುವ ಮೂಲಕ ಹೊಸ ವಿವಾದ ಆರಂಭವಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ಮಾಡಿದ್ದರು. ಅಧಿಕಾರಿಗಳು ಸ್ಪಷ್ಟವಾದ ಮಾಹಿತಿ ನೀಡದ ಹಿನ್ನಲೆಯಲ್ಲಿ ತನಿಖೆಗೆ ಆದೇಶ ನೀಡಿದ್ದರು.