ಬೆಂಗಳೂರು: ಮೆಟ್ರೋ (Namma Metro) ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.
ಮೆಟ್ರೋ ಟಿಕೆಟ್ ದರ ಇಳಿಕೆ ಮಾಡುವಂತೆ ಬಿಎಂಆರ್‌ಸಿಎಲ್ (BMRCL) ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಸಿಎಂ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Advertisement
Advertisement
ಟ್ವೀಟ್‌ನಲ್ಲಿ ಏನಿದೆ?
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ಇದನ್ನೂ ಓದಿ: ಮಹಿಳಾ ಎಸಿಪಿ ಜೊತೆ ಸಂಬಂಧ ಆರೋಪ – ಎಸಿಪಿ ಗೋವರ್ಧನ್ ವಿರುದ್ಧ ಪತ್ನಿ ದೂರು
Advertisement
Advertisement
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನ ಉದಯಗಿರಿ ಗಲಾಟೆ – ಕಲ್ಲು ತೂರಿದ 1,000 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಎಫ್‌ಐಆರ್