ಮೈಸೂರು: ವರುಣದಲ್ಲಿ (Varuna) ಮೂಗುಮಾರಮ್ಮ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ವೇಳೆ ಗ್ರಾಮಸ್ಥರು ಮುಂದಿನ ಸಿಎಂ ಸಿದ್ದರಾಮಯ್ಯ (Siddarmaiah) ಎಂದು ಘೋಷಣೆ ಕೂಗಿದ್ದಾರೆ.
ವರುಣಾ (Varuna) ಕ್ಷೇತ್ರದ ಹೊಸಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದ ಮೂಗುಮಾರಮ್ಮ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಕೂಡ ಸಾಥ್ ನೀಡಿದರು. ಇದನ್ನೂ ಓದಿ: ಭೂ ಗ್ಯಾರಂಟಿ ಯೋಜನೆಯಡಿ ಇ-ಸ್ವತ್ತು 2.0ಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ
ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಹೂಮಳೆಗೈದು ಅದ್ದೂರಿಯಾಗಿ ಸ್ವಾಗತ ಕೋರಿದರು. ವೇದಿಕೆಯಲ್ಲಿ ಸಿದ್ದರಾಮಯ್ಯ ಅವರು ಭಾಷಣ ಆರಂಭಿಸುತ್ತಿದ್ದಂತೆ, ಅಭಿಮಾನಿಗಳು ಮತ್ತು ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಜೋರಾಗಿ ಘೋಷಣೆ ಕೂಗಿದರು.
ನಮಗೆ ತೃಪ್ತಿ ಇಲ್ಲ, ನೀವು ಮತ್ತೆ ಸಿಎಂ ಆಗಬೇಕು. ರಾಜ್ಯದ ಏಳು ಕೋಟಿ ಜನರ ಆಶೀರ್ವಾದ ನಿಮ್ಮ ಮೇಲಿದೆ ಎಂದು ಅಭಿಮಾನಿಗಳು ಘೋಷಿಸಿದರು.ಇದನ್ನೂ ಓದಿ: ಮಡಿಕೇರಿ | ಅಂಗನವಾಡಿ ಕಾರ್ಯಕರ್ತೆಯರ ವೇತನ ಪಾವತಿಯಲ್ಲಿ ಗೋಲ್ಮಾಲ್ ಆರೋಪ; ಮೂವರು ಸಿಬ್ಬಂದಿ ವಿರುದ್ಧ ದೂರು
