– ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿರುವ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಿಎಂ
ಬೆಳಗಾವಿ: ನಾಳೆ 1 ಗಂಟೆಗೆ (ಜ.21) ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು.
Advertisement
ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಕಳೆದ ತಿಂಗಳು 27 ರಂದು ಈ ಸಮಾವೇಶ ನಡೆಯಬೇಕಿತ್ತು. ಮನಮೋಹನ್ ಸಿಂಗ್ ನಿಧನದಿಂದ ರದ್ದಾಯಿತು. ಮಹಾತ್ಮಾ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಎಷ್ಟು ಪ್ರಸ್ತುತ, ನಮ್ಮ ಸಂವಿಧಾನ ರಕ್ಷಣೆ ಮಾಡುವ ಜವಾಬ್ದಾರಿಯಿದೆ. ಸಂವಿಧಾನ ಇಡೀ ಭಾರತೀಯರನ್ನ ರಕ್ಷಣೆ ಮಾಡುತ್ತದೆ ಎಂದು ಹೇಳಿದರು.
Advertisement
ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ನಾಳೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದ್ದು ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಾನು ಇಂದು ಅಂತಿಮ ಹಂತದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದೆವು. ಮಹಾತ್ಮಾ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ ಈ ಚಾರಿತ್ರಿಕ… pic.twitter.com/VCY4TmpJuJ
— DK Shivakumar (@DKShivakumar) January 20, 2025
Advertisement
1924 ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. 1924 ರಲ್ಲಿ ಡಿಸೆಂಬರ್ 26 ರಂದು ನಡೆದ ಸಮಾವೇಶ ಅಧ್ಯಕ್ಷತೆ ಗಾಂಧೀಜಿ ವಹಿಸಿದ್ದರು. ಸಮಾವೇಶ ಸಿದ್ಧತೆಯನ್ನ ಡಿಕೆಶಿ ಅಚ್ಚುಕಟ್ಟಾಗಿ ಮಾಡಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಜನ ಸೇರ್ತಾರೆ. ಸಮಾವೇಶದಲ್ಲಿ ಯಾವುದೇ ವಿಶೇಷ ಕೊಡುಗೆ ಘೋಷಣೆ ಮಾಡಲ್ಲ. ಇದು ನೂರು ವರ್ಷದ ಸವಿ ನೆನಪು ಎಂದು ಸ್ಪಷ್ಟಪಡಿಸಿದರು.
Advertisement
ಸಮಾವೇಶದ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರವಾಗಿ ಮಾತನಾಡಿ, ಪ್ರಹ್ಲಾದ್ ಜೋಶಿಗೆ ಇತಿಹಾಸ ಗೊತ್ತಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಏನು ಮಾತಾಡಿದ್ರು ಗೊತ್ತಿದೆಯಾ? ಇದು ಅವರಿಗೂ ಗೊತ್ತಿಲ್ಲ, ನಿಮಗೂ ಗೊತ್ತಿಲ್ಲ. ಸರ್ಕಾರದ ಕಾರ್ಯಕ್ರಮ ಬೇರೆ. ಸಮಾವೇಶವನ್ನ ಪಕ್ಷದಿಂದ ಮಾಡುತ್ತಿದ್ದೇವೆ ಎಂದರು.
ಗೋಡ್ಸೆ ಹತ್ಯೆಯಲ್ಲಿ ನೆಹರೂ ಪಾತ್ರವಿದೆ ಅಂತಾ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇತಿಹಾಸ ಯತ್ನಾಳ್‌ಗೂ ಗೊತ್ತಿಲ್ಲ, ನಿಮಗೂ ಗೊತ್ತಿಲ್ಲ. ಯತ್ನಾಳ್ ಇತಿಹಾಸವನ್ನ ಓದಿಕೊಂಡಿಲ್ಲ. ಅಂಬೇಡ್ಕರ್ ಏನೂ ಹೇಳಿದ್ದಾರೆ ಗೊತ್ತಾ? ಇತಿಹಾಸ ಗೊತ್ತಿಲ್ಲದೇ ಭವಿಷ್ಯ ರೂಪಿಸಲು ಆಗುವುದಿಲ್ಲ ಅಂತಾ ಹೇಳಿದ್ದಾರೆ. ಗೋಡ್ಸೆ, ಮಹಾತ್ಮಾ ಗಾಂಧಿ ಹತ್ಯೆ ಮಾಡಿದ್ದು. ಅವರೊಂದಿಗೆ ಯಾರಿದ್ದರು ಗೊತ್ತಾ ನಿಮಗೆ? ಸಾವರ್ಕರ್ ಮೇಲೆ ಕೇಸ್ ಇದ್ದವು ಗೊತ್ತಾ ನಿಮಗೆ ಎಂದು ಹೇಳಿದರು.
ಇದೇ ವೇಳೆ, ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾದರು. ಖಾಸಗಿ ಆಸ್ಪತ್ರೆಗೆ ತೆರಳಿ ಸಚಿವರ ಆರೋಗ್ಯ ವಿಚಾರಿಸಿದರು. ಸಚಿವೆ ಹೆಬ್ಬಾಳ್ಕರ್ ಅವರಿಗೆ ಧೈರ್ಯ ತುಂಬಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಪರಮೇಶ್ವರ್, ಸಚಿವ ಹೆಚ್.ಸಿ.ಮಹದೇವಪ್ಪ ಸಾಥ್ ನೀಡಿದರು.