ಮಂಗಳೂರು: ಹರೀಶ್ ಪೂಂಜಾ (Harish Poonja) ಶಾಸಕರಾದ ಮಾತ್ರಕ್ಕೆ ಅವರ ಮೇಲಿನ ಆರೋಪಗಳನ್ನು ಅಲ್ಲಗಳೆಯಲು ಸಾಧ್ಯವೇ? ಶಾಸಕರಾದ ಮಾತ್ರಕ್ಕೆ ಪೊಲೀಸರಿಗೆ ಬೆದರಿಕೆ ಹಾಕಬಹುದೇ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರು (Mangaluru) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದರು. ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿವೆ. ಕಾನೂನು ಎಲ್ಲರಿಗೂ ಒಂದೇ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲು ತೂರಾಟ
ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ (Congress) ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ, ಹರೀಶ್ ಪೂಂಜಾ ವಿರುದ್ಧ ಐಪಿಸಿ ಸೆಕ್ಷನ್ 353ರ ಪ್ರಕಾರ ಎಫ್‍ಐಆರ್ ದಾಖಲಿಸಲಾಗಿದೆ. ಅದು ಜಾಮೀನು ರಹಿತ ಪ್ರಕರಣ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಅವರು ಶಾಸಕರು ಎಂಬ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ? ಪೂಂಜಾ ಯಾರ ಪರವಾಗಿ ಗಲಾಟೆ ಮಾಡಿದ್ದಾರೆ? ಈ ಪ್ರಕರಣದಲ್ಲಿ ಕಾಂಗ್ರೆಸ್‍ನ ಒತ್ತಡ ಅಂದ್ರೆ ಏನು ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಗ್ಯಾಂಗ್ ವಾರ್ – ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕಿಡಿ