ನವದೆಹಲಿ: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಕಸರತ್ತು ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ. ಈ ಸಂಬಂಧ ವರದಿ ಪಡೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಪಟ್ಟಿ ಪರಿಶೀಲನೆ ಮಾಡಿ ಎರಡು ಮೂರು ದಿನದಲ್ಲಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ನಿಗಮ ಮಂಡಳಿ ಆಯ್ಕೆ ಸಂಬಂಧ ಬುಧವಾರ ಎಐಸಿಸಿ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (K.C.Venugopal), ಸಂಸದ ರಾಹುಲ್ ಗಾಂಧಿ (Rahul Gandhi), ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಭಾಗಿಯಾಗಿದ್ದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಬೆಂಗಳೂರು, ನೀರಾವರಿ ಯೋಜನೆಗಳಿಗೆ ಅನುಮತಿ & ಹಣಕಾಸು ನೆರವು ಕೋರಿದ ಡಿಸಿಎಂ
Advertisement
Advertisement
ಸಭೆಯಲ್ಲಿ ಮೊದಲ ಹಂತದಲ್ಲಿ 37 ಮಂದಿ ಶಾಸಕರಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಸಿಎಂ ಪ್ರಸ್ತಾಪಿಸಿದರು. ಆದರೆ ಮೊದಲ ಹಂತದಲ್ಲೆ ಕೆಲವು ಹಿರಿಯ ನಾಯಕರು ಮತ್ತು ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ರಾಹುಲ್ ಗಾಂಧಿ ಹಾಗೂ ಕೆ.ಸಿ ವೇಣುಗೋಪಾಲ್ ಸಲಹೆ ನೀಡಿದರು ಎನ್ನಲಾಗಿದೆ. ಈ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನೆಲೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಯ ಬೇಕು ಎಂದು ಸಿಎಂಗೆ ಖರ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.
Advertisement
ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಕಳುಹಿಸಿದ ಪಟ್ಟಿಯನ್ನು ಇನ್ನು ವರಿಷ್ಠರು ನೋಡಿಲ್ಲ. ನೋಡಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ. ಎರಡು ಮೂರು ದಿನದಲ್ಲಿ ಹೈಕಮಾಂಡ್ ನಾಯಕರು ಪ್ರತಿಕ್ರಿಯೆ ನೀಡಬಹುದು. ಆ ಬಳಿಕ ಪಟ್ಟಿ ಬಿಡುಗಡೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆ ನಡೆಸಿದೆ ಎಂದರು. ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ಸಿಎಂ – ಬರ ಪರಿಹಾರ ಬಿಡುಗಡೆಗೆ ಆಗ್ರಹ
Advertisement
ಡಿ.ಕೆ ಶಿವಕುಮಾರ್ ಮಾತನಾಡಿ, ಬೆಂಗಳೂರಿನಲ್ಲೂ ಹಲವು ಸಭೆ ನಡೆಸಿ ಪಟ್ಟಿ ತಯಾರಿ ಮಾಡಲಾಗಿತ್ತು. ನಮ್ಮ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದೆ. ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬಹುದು. ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು. ಮೊದಲಿನಿಂದಲೂ ಈ ಪ್ರಸ್ತಾಪ ಇದೆ. ಕಾರ್ಯಕರ್ತರಿಗೆ ಅವಕಾಶ ನೀಡಲು ನಮ್ಮ ವಿರೋಧ ಏನಿಲ್ಲ. ಪಟ್ಟಿ ಬಿಡುಗಡೆ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧರಿಸಲಿದ್ದಾರೆ ಎಂದರು.
ಮುಂದುವರಿದು ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆಯಾಗಿದೆ. ಇದೇ ತಿಂಗಳು 22 ರೊಳಗೆ ಅಭ್ಯರ್ಥಿಗಳ ಆಯ್ಕೆ ಕುರಿತು ವರದಿ ಸಲ್ಲಿಸಲು ಸೂಚಿಸಿದ್ದಾರೆ. ನಾಳೆ ಕ್ಯಾಬಿನೆಟ್ ಸಭೆಯಲ್ಲೂ ಸಿಎಂ ಸಚಿವರಿಗೆ ಈ ಸೂಚನೆ ನೀಡಲಿದ್ದಾರೆ. ಜಿಲ್ಲಾ ಚುನಾವಣಾ ಉಸ್ತುವಾರಿವಾರಿಗಳು ಮೂರು ಅಭ್ಯರ್ಥಿಗಳ ಹೆಸರು ಸೂಚಿಸಬೇಕು. ಅಂತಿಮವಾಗಿ ಯಾರಿಗೆ ಟಿಕೆಟ್ ಎನ್ನುವುದು ಹೈಕಮಾಂಡ್ ನಿರ್ಧರಿಸಲಿದೆ. ಸಂಕ್ರಾಂತಿಯೊಳಗೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ವಿಚಾರ, ಆ ರೀತಿಯ ಮುಹೂರ್ತ ಏನಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಇದನ್ನೂ ಓದಿ: ಇಲ್ಲಿಯವರೆಗೆ ಸಿಕ್ಕಿರಲಿಲ್ಲ, ಮೋದಿಗೆ ಖರ್ಗೆ ಮ್ಯಾಚ್ ಆಗಬಲ್ಲ ನಾಯಕ – ಸತೀಶ್ ಜಾರಕಿಹೊಳಿ