ಬೆಂಗಳೂರು: ಮುಡಾ ಕೇಸಲ್ಲಿ (MUDA Case) ಕ್ಲೀನ್ ಚಿಟ್ ವಿಚಾರ ನನಗೆ ಗೊತ್ತಿಲ್ರಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವದಂತಿಯನ್ನು ತಳ್ಳಿಹಾಕಿದ್ದಾರೆ.
ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನನಗೆ ಆ ಬಗ್ಗೆ ಗೊತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ಮಿಮ್ಸ್‌ನಲ್ಲಿ ಅವ್ಯವಸ್ಥೆಯ ಆಗರ – ಅಧಿಕಾರಿಗಳಿಗೆ ಡಿಸಿ ತೀವ್ರ ತರಾಟೆ
ನಾನು ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಗೆ ಹೋಗಬೇಕಿತ್ತು, ಆದರೆ ಬಜೆಟ್ ತಯಾರಿ ಇದೆ ಹೀಗಾಗಿ ಹೋಗ್ತಿಲ್ಲ. ಕಳೆದ ವರ್ಷವೂ ನಾನು ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ಕೂಗು ಹಾಗೂ ಪೂಜೆ ವಿಚಾರವಾಗಿ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ. ಇದನ್ನೂ ಓದಿ: ನಿಂತಿದ್ದ ಕಾರಿಗೆ ಟ್ರಕ್ ಡಿಕ್ಕಿ – ಆರು ಮಂದಿಗೆ ಗಂಭೀರ ಗಾಯ