ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಯಾವ ಫ್ಲೈಟ್‍ನಲ್ಲಿ ಓಡಾಡುತ್ತಾರೆ..? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ.
ಜಮೀರ್ ಜೊತೆ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?. ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಸಿಎಂ ಸಿಡಿಮಿಡಿಗೊಂಡರು.
ಏನಿದು ಘಟನೆ..?: ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ವೀಡಿಯೋವೊಂದನ್ನು ಜಮೀರ್ ಅಹ್ಮದ್ (Zameer Ahmed Khan) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದ್ದು, ವೀಡಿಯೋ ಶೇರ್ ಮಾಡಿಕೊಂಡು ಬಿಜೆಪಿ ನಾಯಕರು ಭಾರೀ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಸಿಎಂ, ಸಚಿವರು ಜೆಟ್‍ನಲ್ಲಿ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ?: ಅಶೋಕ್ ಕಿಡಿ
ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ @siddaramaiah ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು.@CMofKarnataka @Iam_KGovindaraj pic.twitter.com/2rcbIy9QgE
— B Z Zameer Ahmed Khan (@BZZameerAhmedK) December 21, 2023
ವಿಪಕ್ಷ ನಾಯಕ ಆರ ಅಶೋಕ್ ಅವರು, ರಾಜ್ಯದಲ್ಲಿ ಬರದ ಸಂಕಷ್ಟಕ್ಕೆ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚು ರೈತರ ಜಮೀನಿನಲ್ಲಿ ಬೆಳೆ ನಷ್ಟ ಆಗಿದೆ. ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಜೆಸಿಬಿಯಲ್ಲಿ ಶಾಲೆ ಮಕ್ಕಳು ಶಾಲೆಗೆ ಹೋಗ್ತಿದ್ದಾರೆ. ಇತ್ತ ಸಿಎಂ, ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ?, ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ ಎಂದು ಪ್ರಶ್ನಿಸುತ್ತಾ ಅಶೋಕ್ ಅವರು ಎರಡು ಫೋಟೋಗಳನ್ನು ಬಿಡುಗಡೆಗೊಳಿಸಿದರು.