ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ (Ekanath Shinde) ಅವರ ಆಪರೇಷನ್ ಸುಳಿವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ ಮಾಡುತ್ತಾನೇ ಇದ್ದಾರೆ. ಆದರೆ ಇದು ಸಾಧ್ಯವಿಲ್ಲ ಎಂದಿದ್ದಾರೆ.
Advertisement
Advertisement
ಅದು ಅವರ ಭ್ರಮೆ. ಆಪರೇಷನ್ ಕಮಲ ಸಾಧ್ಯ ಇಲ್ಲ. ಅವರು ಪಾರ್ಲಿಮೆಂಟ್ ಸೋಲ್ತಾ ಇದ್ದಾರೆ. ಎನ್ ಡಿಎ ಸೋಲ್ತಾ ಇದೆ. ಅವರು ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಕಳೆದ ಒಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಆದರೂ ಆಪರೇಷನ್ ಮಾಡ್ತಾನೆ ಇದ್ದಾರೆ. ಅಂತಹ ಪ್ರಯತ್ನ ಯಶಸ್ವಿಯಾಗಲ್ಲ. ಅವರ ಪ್ರಯತ್ನ ಸಫಲ ಆಗಲ್ಲ ಎಂದರು.
Advertisement
ಲೋಕಸಭಾ ಚುನಾವಣೆ ಯಲ್ಲಿ ನಾವು 20 ಸೀಟ್ ಗೆಲ್ಲುತ್ತೇವೆ. ಅವರು ಚುನಾವಣೆಯಲ್ಲಿ ಸೋಲುತ್ತಾರೆ. ಅದಕ್ಕೆ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Advertisement
ಶಿಂಧೆ ಹೇಳಿದ್ದೇನು..?: ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿದ ಶಿಂಧೆ, ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಸ್ಫೊಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ಇತ್ತಿಚೇಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲಿಯೂ ‘ನಾಥ’ ಆಪರೇಷನ್ ಮಾಡೋದಿದೆ’ ಅಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Exclusive: ಕರ್ನಾಟಕದಲ್ಲಿ ‘ಆಪರೇಷನ್ ನಾಥ’ ಸುಳಿವು ಕೊಟ್ಟ ಏಕನಾಥ ಶಿಂಧೆ!
‘ನಾಥ ಆಪರೇಷನ್’ ಅಂದ್ರೆ ಏನು..? ಅಂತ ಕೇಳಿದೆ. ಆಗ ಅವರು, ನೀವು ಮಹಾರಾಷ್ಟ್ರದ ಮಹಾಘಟಬಂಧನ ಸರ್ಕಾರ ಪತನ ಮಾಡಿದ್ರಿ. ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದರು. ಖಂಡಿತವಾಗಿಯೂ ನಾನು ಬರುತ್ತೇನೆ ಎಂದು ಹೇಳಿದ್ದೇನೆ ಅಣತಾ ಇಂದು ಶಿಂಧೆ ಹೇಳುವ ಮೂಲಕ ಪರೇಷನ್ ಸುಳಿವು ಕೊಟ್ಟಿದ್ದಾರೆ.