ಬೆಂಗಳೂರು: ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಡುತ್ತಿದ್ದ ಶಾಸಕರನ್ನ ಸಮಾಧಾನ ಪಡಿಸಲು ಮುಂದಾದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗ್ರಾಮೀಣ ಭಾಗದ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
Advertisement
2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದಾಗಿ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ (Assembly Constituencies) ಸರ್ಕಾರದಿಂದ ತಲಾ 10 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: Delhi Poll | ಗರ್ಭಿಣಿಯರಿಗೆ 21,000 ರೂ., ಪ್ರತಿ ಮಹಿಳೆಗೆ 2,500 ರೂ., 500 ರೂ.ಗೆ ಗ್ಯಾಸ್ ಸಿಲಿಂಡರ್ – ಬಿಜೆಪಿ ʻಸಂಕಲ್ಪ ಪತ್ರʼ ಬಿಡುಗಡೆ
Advertisement
Advertisement
ಗ್ರಾಮೀಣ ಭಾಗದ 189 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗಳು ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿಗಳಂತೆ ಒಟ್ಟು 1,890 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ – ರಷ್ಯಾ ಪರ ಹೋರಾಡ್ತಿದ್ದ 12 ಭಾರತೀಯರು ಬಲಿ, 16 ಮಂದಿ ನಾಪತ್ತೆ
Advertisement
ಮಳೆ ಹಾನಿಗೆ ಒಳಗಾದ ರಸ್ತೆ ಸೇತುವೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮಾಡಲಾಗಿದ್ದು, ನಿಗದಿತ ಕಾಮಗಾರಿಗಳಿಗಷ್ಟೇ ಬಳಸುವಂತೆ ಸೂಚನೆ ಸಹ ನೀಡಲಾಗಿದೆ. ಇದನ್ನೂ ಓದಿ: Chhattisgarh| ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟ – ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ