ಬೆಳಗಾವಿ/ಬೆಂಗಳೂರು: ಬಿಜೆಪಿಯವ್ರು (BJP) ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ (Muslim Community) ಶೇ.4ರಷ್ಟು ಮೀಸಲಾತಿ ವಾಪಸ್ ಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
Advertisement
ಬೆಳಗಾವಿ ಚಳಿಗಾಲ ಅಧಿವೇಶನದ (Belagavi Winter Session)ಮೊದಲ ದಿನ ಸದನದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಕುರಿತು ಸಿಎಂ ಮಾತನಾಡಿದರು. ಪಂಚಮಸಾಲಿ (Panchamasali) ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್
Advertisement
Advertisement
ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದರು. ಈ ವೇಳೆ ಸ್ಪಷ್ಟನೆ ನೀಡಿದ ಗೃಹ ಸಚಿವರು 5,000 ಟ್ರ‍್ಯಾಕ್ಟರ್‌ಗಳನ್ನು ತರಲು ಮುಂದಾಗಿದ್ದಾರೆ. ಹಾಗಾಗಿ ಲಾ ಅಂಡ್ ಆರ್ಡರ್ ಸಮಸ್ಯೆ ಆಗುತ್ತೆ ಅಂತ ಅನುಮತಿ ಕೊಡಲಿಲ್ಲ. ನಂತರ ಜನ ಬರ್ತಾರೆ ವಾಹನಗಳಲ್ಲಿ ಅಂದ್ರು, ಜನ ಬರೋ ವಾಹನಗಳಿಗೂ ನಾವು ಮಿತಿ ಹಾಕಿದ್ದೇವೆ. ಪ್ರತಿಭಟನೆ ಮಾಡಲು ಅಡ್ಡಿ ಇಲ್ಲ, ಆದ್ರೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಅಷ್ಟೇ ಎಂದು ಗೃಹಸಚಿವರು ತಿಳಿಸಿದ್ರು. ಇದನ್ನೂ ಓದಿ: ಪ್ರತಿ ತಿಂಗಳು ಎಷ್ಟು ಮಂದಿಗೆ ಯುವನಿಧಿ ಹಣ ಸೇರುತ್ತಿದೆ – ಲೆಕ್ಕ ಕೊಟ್ಟ ಸರ್ಕಾರ
Advertisement
ಬಳಿಕ ಮಾತು ಮುಂದುವರಿಸಿದ ಸಿಎ, ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ ಎಂದರು. ಇದನ್ನೂ ಓದಿ: 9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ಕ್ರಮ: ಈಶ್ವರ್ ಖಂಡ್ರೆ
ಈ ಹಿಂದೆ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸುವುದಿಲ್ಲ. ಯತಾಸ್ಥಿತಿ ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಕೋರ್ಟ್ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುತ್ತೇನೆ ಎಂದು ಹೇಳಿದರು.