– ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದ ಸಿಎಂ
ಮಡಿಕೇರಿ: ಭಾಗಮಂಡಲ ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮವಾಗಿದೆ. ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಕೊಡಗಿನ ಅಭಿವೃದ್ಧಿಗೆ (Kodagu Development) ಅನುದಾನ ನೀಡಿದಂತೆ, ಈ ಬಾರಿಯೂ ಕೊಡಗಿನ ರಸ್ತೆ ಹಾಗೂ ಇತರ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದರು.
ಭಾಗಮಂಡಲ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಮೇಲ್ಸೆತುವೆ ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿನ ಅಭಿವೃದ್ಧಿಗೆ ಈ ಬಾರಿಯೂ ಅನುದಾನ ನೀಡುವುದಾಗಿ ಹೇಳಿದರು. ಇದನ್ನೂ ಓದಿ: ಟಿಕ್‌ಟಾಕ್ ವೀಡಿಯೋ ಮಾಡಿದ್ದಕ್ಕೆ ಪಾಕಿಸ್ತಾನದಲ್ಲಿ 15 ವರ್ಷದ ಪುತ್ರಿಯನ್ನೇ ಗುಂಡಿಕ್ಕಿ ಕೊಂದ ಅಪ್ಪ
ಮುಂದುವರಿದು.. ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಚಿತ್ರದುರ್ಗದಿಂದ ತೆರಳಿದ್ದ ನಾಗ ಸಾಧು ಸಾವು
ಎಲ್ಲಾ ಧರ್ಮಗಳು, ಜಾತಿಗಳೂ ಎಲ್ಲಾ ಜನರೂ ಸಹ ಸಮಾನ. ಅದಕ್ಕಾಗಿಯೇ ಸಂವಿಧಾನದಲ್ಲಿ ಸಹಿಷ್ಣುತೆ ಹಾಗೂ ಸಹಬಾಳ್ವೆ ಇರಬೇಕು ಎಂದಿರುವುದು. ನಮ್ಮ ಧರ್ಮವನ್ನು ಪ್ರೀತಿಸಿ, ಗೌರವಿಸಬೇಕು. ಆದರೆ ಇನ್ನೊಂದು ಧರ್ಮವನ್ನು ಅಲ್ಲಗಳೆಯಬಾರದು. ಅದನ್ನೇ ಸಹಿಷ್ಣುತೆ ಎನ್ನುತ್ತಾರೆ. ಸಹಿಸ್ಣುತೆ ಇದ್ದಾಗ ಮಾತ್ರ ನಾವು ಮಾನವರಾಗಿ ಬಾಳಲು ಸಾಧ್ಯವಾಗುತ್ತದೆ. ಕುವೆಂಪು ಅವರು ʻಮನುಷ್ಯ ಹುಟ್ಟುವಾಗ ವಿಶ್ವ ಮಾನವನಾಗಿರುತ್ತಾನೆ, ಬೆಳೆಯುತ್ತಾ ಅಲ್ಪಮಾನವನಾಗುತ್ತಾನೆʼ ಎಂದು ಹೇಳಿದರು. ನಾವೆಲ್ಲರೂ ವಿಶ್ವಮಾನವರಾಗುವ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ದೇಸಿ ಗರ್ಲ್ ಈಗ ದುಬಾರಿ- ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ
ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಶಕ್ತಿ:
ಇದೇ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಸಿಎಂ, ಯಾವ ಪಕ್ಷ ನುಡಿದಂತೆ ನಡೆಯುತ್ತದೆ, ಜನಪರವಾಗಿದೆ ಅನ್ನೋದನ್ನ ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 1 ವರ್ಷ 8 ತಿಂಗಳಲ್ಲಿ ಪ್ರಮುಖವಾಗಿ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಶಕ್ತಿ, ಅನ್ನ ಭಾಗ್ಯ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಜಾರಿಗೆ ತಂದು ಸಮಾಜದಲ್ಲಿನ ಎಲ್ಲಾ ಜಾತಿಯ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿರುವುದು ನಮ್ಮ ಸರ್ಕಾರ. 5 ಗ್ಯಾರಂಟಿಗಳನ್ನು ಜಾರಿಗೆ ತಂದು ಸಮಾಜದಲ್ಲಿ ಸಮಾನತೆಯನ್ನು ತರುವ ಪ್ರಯತ್ನವನ್ನು ನಾವು ಮಾಡಿದ್ದೇವೆ ಎಂದು ನುಡಿದರು.