ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹಿರೇಮಠ (Neha Hiremath) ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.
ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣವನ್ನ ಸಿಐಡಿ ತನಿಖೆಗೆ (CID Investigation) ವಹಿಸುತ್ತೇವೆ. ಇದಕ್ಕಾಗಿ ವಿಶೇಷ ಕೋರ್ಟ್ (Speical Court) ಅನ್ನು ರಚಿಸುತ್ತೇವೆ ಎಂದು ಹೇಳಿದ್ದಾರೆ.
Advertisement
Advertisement
ನಾನು ನೇಹಾ ಅವರ ಮನೆಗೆ ಹೋಗಲು ಆಗಿಲ್ಲ. ನಮ್ಮ ಸಚಿವರು, ಕಾರ್ಯಕರ್ತರು ಅವರ ಮನೆಗೆ ಹೋಗಿದ್ದಾರೆ. ಇದನ್ನೂ ಓದಿ: ಮಿಷನ್-100 ಟಾರ್ಗೆಟ್; 98ರಲ್ಲಿ ಸೋಲು, 99ನೇ ಚುನಾವಣೆಯಲ್ಲಿ ಮತ್ತೆ ಕಣಕ್ಕೆ – ಈ ಅಭ್ಯರ್ಥಿ ಯಾರು ಗೊತ್ತೆ?
Advertisement
ಇದೇ ವೇಳೆ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿಗಳು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಕೊಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ