– 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗ್ತಿವೆ
– 10,000 ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2,000 ಕೋಟಿ
ಬೆಂಗಳೂರು: ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದಿನ ವರ್ಷ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2 ಸಾವಿರ ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ (New Police Stations) ನಿರ್ಮಾಣ ಆಗುತ್ತಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೌರವದಿಂದ ಬಾಳಿ ಬದುಕೋಣ, ದಾಳಿ ನಿಲ್ಲಿಸಿ – ಪಾಕಿಸ್ತಾನಕ್ಕೆ ಫಾರೂಕ್ ಅಬ್ದುಲ್ಲಾ ಮನವಿ
Advertisement
Advertisement
ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಅವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಸಿಎಂ ಸ್ಮರಿಸಿದ್ದಾರೆ.
Advertisement
Advertisement
ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು.ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನ ಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ. ಅಪರಾಧ ತಡೆಯಲು 6,000 ಸಿಸಿ ಕ್ಯಾಮರಾಗಳು, 260ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯ ಆರಂಭ – 5 ಮಹಡಿಯ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣ