– ಜಾತಿ ಕಾರಣದಿಂದ ಕನಕದಾಸರನ್ನ ಉಡುಪಿ ಮಠದ ಒಳಗೆ ಬಿಡಲಿಲ್ಲ
– ʻಕನಕನ ಕಿಂಡಿʼ ಪ್ರಸಂಗ ಉಲ್ಲೇಖಿಸಿದ ಸಿದ್ದರಾಮಯ್ಯ
ದಾವಣಗೆರೆ: ಸಮಸಮಾಜ ನಿರ್ಮಾಣ ಮಾಡಬೇಕೆಂದರೆ ಜಾತಿ ಜನಗಣತಿಯಿಂದ ಮಾತ್ರ ಸಾಧ್ಯ. ನಾನು ಜಾತಿ ಜನಗಣತಿ ಪರವಾಗಿದ್ದೇನೆ. ಕಾಂತರಾಜು ಸಮಿತಿ ವರದಿಯನ್ನ (Kantaraj Committee Report) ಮುಂದಿನ ಕ್ಯಾಬಿನೆಟ್‌ನಲ್ಲಿಟ್ಟು ಚರ್ಚಿಸುವ ಉದ್ದೇಶವಿದೆ. ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದರು.
Advertisement
ದಾವಣಗೆರೆಯ (Davanagere) ಹೈಸ್ಕೂಲ್ ಮೈದಾನದಲ್ಲಿ ನಡೆದ ಕನಕದಾಸ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕದಾಸರು ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದು ಸ್ಮರಿಸಿದರು. ಇದನ್ನೂ ಓದಿ: ಆಕ್ಷೇಪಾರ್ಹ ಹೇಳಿಕೆ ಪ್ರಕರಣ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು – CRPF ಭದ್ರತೆ ಕೋರಿದ ಸಿ.ಟಿ ರವಿ
Advertisement
Advertisement
ಶರಣ ಸಾಹಿತ್ಯದಲ್ಲಿ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ಧನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.
Advertisement
ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದ್ರೆ ಮುಂದುವರಿದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಕವಾಗಿ ತಪ್ಪಾಗುತ್ತದೆ. ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ. ಮನುಷ್ಯ ಧರ್ಮ ಸ್ಥಾಪನೆ ಆಗುವವರೆಗೂ ನಾವೆಲ್ಲರೂ ಶ್ರಮಿಸುತ್ತಲೇ ಇರಬೇಕು. ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ತಾರತಮ್ಯ ಮಾಡುವವರನ್ನು ವಿರೋಧಿಸುತ್ತೇನೆಯೇ ಹೊರತು ಅವರನ್ನೂ ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ, ಎನ್ನುತ್ತಾ ಕನಕನ ಕಿಂಡಿ ಸೃಷ್ಟಿಯಾದ ಪ್ರಸಂಗವನ್ನು ವಿವರಿಸಿದರು. ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ತಪ್ಪೇನು?- ಎಂ.ಬಿ ಪಾಟೀಲ್