Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
Last updated: January 22, 2026 12:26 pm
Public TV
Share
3 Min Read
Siddaramaiah 2 1
SHARE

– ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಅಂತ ಬೇಸರ

ಬೆಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೇ ಸಂವಿಧಾನದ ವಿಧಿಯನ್ನ ಉಲ್ಲಂಘನೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷದ ಮೊದಲ ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು (Governor Thawarchand Gehlot) ಅಧಿವೇಶನ ಆರಂಭಿಸಿ ಆರಂಭಿಕ ಸಾಲನ್ನು ಹೇಳಿ ಸದನದಿಂದ ಹೊರ ನಡೆದರು. ವಿಪಕ್ಷಗಳ ನಡುವೆ ಭಾರೀ ಗದ್ದಲ ಕೋಲಾಹಲಕ್ಕೆ ಕಾರಣವಾಯಿತು. ಇದನ್ನೂ ಓದಿ: ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್‌

vidhan Soudha 2

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯಪಾಲರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸರ್ಕಾರ ಬಂದಾಗ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವುದು ರಾಜ್ಯಪಾಲರ ಸಾಂವಿಧಾನಿಕ ಕರ್ತವ್ಯ. ಆರ್ಟಿಕಲ್‌ 176(1), 163 ರ ಉಲ್ಲಂಘನೆ ಬಹಳ ಸ್ಪಷ್ಟವಾಗಿದೆ. ಈ ವಿಧಿಗಳ ಅನ್ವಯ ರಾಜ್ಯಪಾಲರು ತಾವು ತಯಾರು ಮಾಡಿದ ಭಾಷಣ ಓದುವಂತಿಲ್ಲ. ರಾಜ್ಯ ಸರ್ಕಾದ ಸಂಪುಟ ಸಿದ್ಧಪಡಿಸಿದ ಭಾಷಣವನ್ನ ಓದಲೇಬೇಕು ಎಂದು ಹೇಳಿದರು.  ಇದನ್ನೂ ಓದಿ: ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ – ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ 

ಇದು ವರ್ಷದ ಮೊದಲ ಜಂಟಿ ಅಧಿವೇಶನ, ಜೊತೆಗೆ ವಿಶೇಷ ಅಧಿವೇಶನವೂ ಕೂಡ ಹೌದು. ಏಕೆಂದ್ರೆ, ಕೇಂದ್ರ ಸರ್ಕಾರ ನರೇಗಾ ರದ್ದು ಮಾಡಿ ವಿಬಿಜಿರಾಮ್‌ಜಿ ಕಾಯ್ದೆಯನ್ನ ಹೊಸದಾಗಿ ಕೇಂದ್ರ ಸರ್ಕಾರ ಮಾಡಿದೆ. ಇದಕ್ಕೆ ನಮ್ಮ ಸರ್ಕಾರದಿಂದ ತೀವ್ರ ವಿರೋಧ ಇದೆ. ಮಹಾತ್ಮ ಗಾಂಧಿ ಹೆಸರು ತೆಗೆದಿರೋದಕ್ಕೆ ನಮ್ಮ ವಿರೋಧ ಇದೆ. 20 ವರ್ಷಗಳ ಹಿಂದೆ ಅಂದ್ರೆ 2005 ರಲ್ಲಿ ದಿ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನ ನಿರ್ದೇಶನಗಳಲ್ಲಿ ಇರುವಂತೆ ರೈಟ್‌ ಟು ವರ್ಕ್‌, ರೈಟ್‌ ಟು ಫುಡ್‌, ರೈಟ್‌ ಟು ಎಜುಕೇಶನ್‌,‌ ಆರ್‌ಟಿಐ ಕಾಯ್ದೆಗಳನ್ನ ಜಾರಿಗೆ ತಂದರು. ಕೆಲಸದ ಹಕ್ಕು ಹಳ್ಳಿಯಲ್ಲಿರುವ ಬಡವರಿಗೆ ಕನಿಷ್ಠ 100 ದಿನಗಳ ಉದ್ಯೋಗ ಕೊಡಬೇಕು ಎನ್ನುವಂತಹದ್ದು. ಇದರಲ್ಲಿ ಮಹಿಳೆಯರು, ಸಣ್ಣ ರೈತರಿಗೆ ಅನುಕೂಲವಾಗುತ್ತಿತ್ತು. 53% ಮಹಿಳೆಯರು 28% ದಲಿತರಿದ್ದಾರೆ. ಇವರಿಗೆ ಉದ್ಯೋಗ ಕೊಡ್ತೀವಿ ಅಂತ ಖಾತ್ರಿ ಇಲ್ಲ. ಹಾಗಾಗಿ ಅವರು ಕೇಳಿದ ಜಾಗದಲ್ಲಿ, ಸಣ್ಣ ರೈತರು ಜಮೀಮಿನುಗಳಲ್ಲೇ ಕೆಲಸ ಮಾಡಿಕೊಳ್ಳಲು ಅವಕಾಶ ಇತ್ತು, 365 ದಿನಗಳಲ್ಲಿ ಯಾವಾಗ ಕೆಲಸ ಕೇಳಿದ್ರೂ ಕೆಲಸ ಕೊಡಬಹುದಿತ್ತು. ಆದ್ರೆ ವಿಬಿಜಿರಾಮ್‌ಜಿ ಕಾಯ್ದೆ ಅನ್ವಯ ಕೇಂದ್ರ ಸರ್ಕಾರ ಎಲ್ಲಿ ಹೇಳುತ್ತದೋ ಅಲ್ಲಿ ಕೆಲಸ ಮಾಡಬೇಕು. ಜೊತೆಗೆ ಆಕ್ಷನ್‌ ಪ್ಲ್ಯಾನ್‌ ಮಾಡುವುದು ಆಯಾ ಪಂಚಾಯ್ತಿಗಳು, ಇದನ್ನ ಜಿರಾಮ್‌ಜಿ ಕಾಯ್ದೆಯಲ್ಲಿ ತೆಗೆದುಹಾಕಲಾಗಿದೆ ಎಂದು ಕಿಡಿ ಕಾರಿದರು.

ವಿಪಕ್ಷದವರು ರಾಜ್ಯಪಾಲರ ನಡೆಯನ್ನ ಉದ್ದೇಶಪೂರ್ವಕವಾಗಿ ಸಮೃಥನೆ ಮಾಡಿಕೊಳ್ತಿದ್ದಾರೆ. ಏಕೆಂದ್ರೆ ಇವರಿಗೆ ಯಾವುದೇ ಸ್ವಾತಂತ್ರ್ಯ ಇಲ್ಲ. ಕೇಂದ್ರ ಮಾಡಿದ್ದನ್ನ ಒಪ್ಪಿಕೊಳ್ಳಬೇಕು ಅನ್ನೋ ನೀತಿ ಮಾಡಿದ್ದಾರೆ. ನಾವು ಅದನ್ನ ವಿರೋಧ ಮಾಡಿದ್ದೇವೆ ಅಂತ ಭಾಷಣದಲ್ಲಿ ಸೇರಿಸಲಾಗಿತ್ತು. ಆದ್ರೆ ರಾಜ್ಯಪಾಲರು ಜನಪ್ರತಿನಿಧಿಗಳ ಸಭೆಗೆ ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಪಾಲರು ಕ್ಯಾಬಿನೆಟ್‌ ತಯಾರು ಮಾಡಿದ ಭಾಷಣ ಓದದೇ ಅವರೇ ಮಾಡಿದ ಒಂದು ಪ್ಯಾರ ಭಾಷಣ ಓದಿ, ಸಂವಿಧಾನದ ವಿಧಿಗಳನ್ನ ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಉಲ್ಲಂಘನೆಯಾಗಿದೆ. ಅಲ್ಲದೇ ಇದು ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನ ಬಂದಾಗಿನಿಂದ ನಡೆದು ಬಂದ ವಿಚಾರವನ್ನ ಉಲ್ಲಂಘಿಸಿದ್ದಾರೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ಕೇಂದ್ರ ತನ್ನ ತಪ್ಪುಗಳನ್ನ ಮುಚ್ಚಿಟ್ಟುಕೊಳ್ಳಲು ತಾನು ತಯಾರು ಮಾಡಿದ ಭಾಷಣವನ್ನ ಓದಿಸಿದೆ. ಇದು ಸಂವಿಧಾನದ ಉಲ್ಲಂಘನೆ. ಕೋರ್ಟ್‌ನಲ್ಲಿ ದಾವೆ ಹೂಡುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ತಿಳಿಸುತ್ತೇನೆ ಎಂದರು.

ನಮ್ಮ ಉದ್ಧೇಶ ಏನಿತ್ತು ಅಂದ್ರೆ ಮನ್ರೇಗಾವನ್ನ ಮರುಸ್ಥಾಪನೆ ಮಾಡಬೇಕು. ಹೊಸ ಕಾಯ್ದೆ ರದ್ದು ಮಾಡಬೇಕು ಅನ್ನೋದಿತ್ತು. ನರೇಗಾ ಪುನಸ್ಥಾಪನೆ ಮಾಡುವವರೆಗೆ ನಿರಂತರ ಹೋರಾಟ ನಡೆಯುತ್ತೆ. ರೈತ ವಿರೋಧಿ ಕಾಯ್ದೆಗಳನ್ನ ತಂದು ವಾಪಪ್‌ ಪಡೆಯುವವರೆಗೆ ಮಾಡಿದ ರೀತಿ ಹೋರಾಟ ಮುಂದುವರಿಸುತ್ತೇವೆ. ನಮ್ಮ ಸರ್ಕಾರ ಸಚಿವರು, ಶಾಸಕರ ಹಾದಿಯಾಗಿ ಪ್ರತಿಯೊಬ್ಬರೂ ಪ್ರತಿಭಟಿಸಲಿದ್ದಾರೆ ಎಂದು ಗುಡುಗಿದರು.

TAGGED:CN Ponnannagovernorhk Patiljoint sessionMGNREGAsiddaramaiahthawar chand gehlotಎ.ಎಸ್.ಪೊನ್ನಣ್ಣಕಾಂಗ್ರೆಸ್ಬಿಜೆಪಿರಾಜ್ಯಪಾಲರುಲೋಕಭವನಸಿದ್ದರಾಮಯ್ಯಹೆಚ್‍ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories

You Might Also Like

Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
4 seconds ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
15 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
27 minutes ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
36 minutes ago
amir hamza
Bengaluru City

ಬೆಂಗಳೂರು IISc ದಾಳಿಯ ಸಂಚುಕೋರನಿಗೆ ಲಾಹೋರ್‌ನಲ್ಲಿ ಗುಂಡೇಟು – ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

Public TV
By Public TV
47 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಅಪರಾಧಿಗಳಿಗೆ ಶಿಕ್ಷೆ ನಾಳೆ ಪ್ರಕಟ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?