– ತೆರಿಗೆ ಹಂಚಿಕೆಯನ್ನು ಶೇ.50ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು ಎಂದ ಸಿಎಂ
ಬೆಂಗಳೂರು: 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ (16th Finance Commission) ಗುರುವಾರ (ಆ.29) ಸಭೆ ನಡೆಯಲಿದ್ದು, 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: 12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ
ಕರ್ನಾಟಕ, ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂದು ಮನದಟ್ಟು ಮಾಡಿ, ತೆರಿಗೆ ಹಂಚಿಕೆಯನ್ನು ಶೇ.41 ರಿಂದ ಶೇ.50ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಸೆಸ್ ಮತ್ತು ಸರ್ಚಾಜ್ ಗಳಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾಜುಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆಯಾಗುತ್ತಿರುವುದನ್ನು ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: IPL 2025 | ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ನೂತನ ಮೆಂಟರ್ ಆಗಿ ಜಹೀರ್ ಖಾನ್ ನೇಮಕ