Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧ: ಸಿದ್ದರಾಮಯ್ಯ

Bengaluru City

ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧ: ಸಿದ್ದರಾಮಯ್ಯ

Public TV
Last updated: May 5, 2025 2:57 pm
Public TV
Share
3 Min Read
Siddaramaiah 2
SHARE

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ಬದ್ಧರಾಗಿದ್ದೇವೆ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗಳ (Scheduled Caste) ಸಮಗ್ರ ಸಮೀಕ್ಷೆ-2025 ಕುರಿತಂತೆ ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ ಎಂದರು. ಇದನ್ನೂ ಓದಿ: ಒಳ ಮೀಸಲಾತಿಗಾಗಿ ಇಂದಿನಿಂದ ಸಮೀಕ್ಷೆ, 2 ತಿಂಗಳಲ್ಲಿ ಜಾರಿ – ಯಾವ ಹಂತದಲ್ಲಿ ಏನು?

ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು, ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ. 2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1 ಆಗಸ್ಟ್ 2024ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರಿದೆವು ಎಂದು ಹೇಳಿದರು. ಇದನ್ನೂ ಓದಿ: ಕೂದಲೆಳೆ ಅಂತರದಲ್ಲಿ ಪಾರಾದ DMK MP ರಾಜಾ

ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದು ನುಡಿದರು.

ಇಂದಿನಿಂದ 17ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10ರಿಂದ 12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ ಇಂದಿನಿಂದ ಮೇ 17ರ ವರೆಗೆ ಮತ್ತು ಮೇ 19ರಿಂದ 21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು ಎಂದು ಹೇಳಿದರು.

ಮೂರನೇ ಹಂತದಲ್ಲಿ ಮೇ.19ರಿಂದ 22ರವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. 3 ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡ್ತಾರೆ. ಒಟ್ಟು 60 ದಿನ ಸಮಯವಕಾಶ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್‌ಗೆ ಬಸವಣ್ಣನವರ ಹೆಸರು ಹೇಳುವ ಯೋಗ್ಯತೆ ಇಲ್ಲ – ಮಾವಳ್ಳಿ ಶಂಕರ್

ಮೊಬೈಲ್ ಆಪ್
ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30ರಿಂದ ಸಂಜೆ 6:30ರ ವರೆಗೆ ಮೊಬೈಲ್ ಆಪ್‌ನಲ್ಲಿ ಅವಕಾಶ ಮಾಡಲಾಗಿರುತ್ತದೆ. ಇದನ್ನು ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು ಎಂದರು.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದವರ ವಿರುದ್ಧ ಕ್ರಮ: ಬೋಸರಾಜು

ಈ ವೇಳೆ ಸಚಿವ ಹೆಚ್.ಸಿ ಮಹದೇವಪ್ಪ, ಕೆ.ಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕಿ ರೂಪ ಶಶಿಕಲ್, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

TAGGED:bengalurukarnatakareservationScheduled Castesiddaramaiahಕರ್ನಾಟಕಪರಿಶಿಷ್ಟ ಜಾತಿಬೆಂಗಳೂರುಮೀಸಲಾತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
2 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
9 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
19 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
54 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
56 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?