ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಹಿನ್ನೆಲೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜಕೀಯ ನಾಯಕರೂ ಫುಲ್ ಅಲರ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದೇವಸ್ಥಾನಗಳಿಗೂ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ.
ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.…
— CM of Karnataka (@CMofKarnataka) December 1, 2023
Advertisement
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ (Private School) ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನ ತುಷ್ಠೀಕರಣ ಪರಿಣಾಮ ಮುಸ್ಲಿಮರಿಗೆ ನಮ್ಮದೇ ರಾಜ್ಯ ಎನ್ನುವ ಭ್ರಮೆ: ಮುತಾಲಿಕ್
Advertisement
Advertisement
ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ (Government) ಬದ್ಧವಾಗಿದೆ. ವಿದ್ವಂಸಕ ಕೃತ್ಯದ ಬೆದರಿಕೆ ಒಡ್ಡಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಸಾರ್ವಜನಿಕರ ನೆಮ್ಮದಿ ಕದಡುವುದು ಇಂತಹಾ ಯಾವುದೇ ದುಷ್ಟ ಆಲೋಚನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಘಟನೆಯ ಹಿಂದಿರುವ ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.
Advertisement
35 ಶಾಲೆಗಳ ಇ-ಮೇಲ್ ಪರಿಶೀಲನೆ:
ಪೊಲೀಸರ ತನಿಖೆ (Police Investigation) ವೇಳೆ 15 ಅಲ್ಲ ಒಟ್ಟು 35 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದುರುವುದು ಕಂಡುಬಂದಿದೆ. ʻಪಬ್ಲಿಕ್ ಟಿವಿʼ ವರದಿ ನೋಡಿ ಎಚ್ಚೆತ್ತ ಅಧಿಕಾರಿಗಳು ಶಾಲೆಗಳಲ್ಲಿ ಮೇಲ್ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಶಾಲೆಗಳ ಇಂಚಿಂಚೂ ಆವರಣಗಳನ್ನು ತಪಾಸಣೆ ನಡೆಸುಲಾಗುತ್ತಿದೆ. ಇದನ್ನೂ ಓದಿ: Bomb Threat: ಅಪ್ಪ-ಅಮ್ಮನಿಗೆ ಕಷ್ಟ ಆಗ್ತಿದೆ; ಪೊಲೀಸ್ ಕಂಪ್ಲೇಂಟ್ ಕೊಟ್ಟೇ ಕೊಡ್ತೀನಿ – ಪುಟ್ಟ ಬಾಲಕನ ಆಕ್ರೋಶ
ಹುಸಿ ಬಾಂಬ್ ಕರೆ:
ಆರಂಭಿಕ ತನಿಖೆಯಲ್ಲಿ ಬೆಂಗಳೂರು ಹೊರವಲಯದ ಹಲವು ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ಗೊತ್ತಾಗಿದೆ. ಅವು ಈ ಕೆಳಗಿನಂತಿವೆ.
ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ 7 ಶಾಲೆಗಳಿಗೆ ಹುಸಿ ಬಾಂಬ್ ಕರೆ
*ಗ್ರೀನ್ ಹುಡ್ ಹೈಸ್ಕೂಲ್, ದಿನ್ನೇಪಾಳ್ಯ
*ಗ್ಲೋಬಲ್ ಇಂಟರ್ನ್ಯಾಷನಲ್ ಶಾಲೆ
*ರಾಯನ್ ಇಂಟರ್ನ್ಯಾಷನಲ್ ಶಾಲೆ
*ಆಲ್ ಬಷೀರ್ ಶಾಲೆ
*ದೀಕ್ಷಾ ಹೈಟ್ ಶಾಲೆ
*ಕಾಂಡರ್ ಇಂಟರ್ನ್ಯಾಷನಲ್ ಶಾಲೆ
*ಬಿವಿಎಂ ಗ್ಲೋಬಲ್ ಶಾಲೆ
ಹೆಬ್ಬಗೋಡಿಯ ಪೊಲೀಸ್ ಠಾಣಾ ವ್ಯಾಪ್ತಿಯ 4 ಶಾಲೆಗಳು
*ಡಿವೈನ್ ಇಂಟರ್ನ್ಯಾಷನಲ್ ಶಾಲೆ
*ಟ್ರೀಮೈಸ್ ಇಂಟರ್ನ್ಯಾಷನಲ್ ಶಾಲೆ
*ಫ್ಲಾರೆನ್ಸ್ ಇಂಟರ್ನ್ಯಾಷನಲ್ ಶಾಲೆ
*ಎಬೆನ್ಸರ್ ಇಂಟರ್ನ್ಯಾಷನಲ್ ಶಾಲೆ
ಸರ್ಜಾಪುರದ ಸರ್ಜಾಪುರ ಪೊಲೀಸ್ ಠಾಣೆ 5 ಶಾಲೆಗಳು
*ಗ್ರೀನ್ ಹುಡ್ ಇಂಟರ್ನ್ಯಾಷನಲ್ ಹೈಸ್ಕೂಲ್
*ಗ್ಲೋಬಲ್ ಇಂಡಿಯನ್ ಇಂಟರ್ನ್ಯಾಷನಲ್ ಶಾಲೆ
*ಓಕರಿಡ್ಜ್ ಶಾಲೆ
*ಟಿ ಐ ಎಸ್ ಬಿ ಶಾಲೆ
*ಇನ್ವೆಂಚರ್ ಅಕಾಡೆಮಿ