ಬೆಂಗಳೂರು: ಗುಜರಾತ್, ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಇಳಿಸಿ ದರವನ್ನು ಕಡಿಮೆ ಮಾಡಿವೆ. ಆದರೆ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಲೆ ಇಳಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತಿದೆ.
ನಾವು ತೈಲ ಬೆಲೆ ಕಡಿಮೆ ಮಾಡುವುದಕ್ಕೆ ಆಗುವುದಿಲ್ಲ. ಕೇಂದ್ರ ಸರ್ಕಾರವೇ ಮಾಡಬೇಕು ಎಂದು ಹೇಳಿ ಮತ್ತೆ ಜಾರಿಕೊಂಡಿದ್ದಾರೆ. ಬೇರೆ ರಾಜ್ಯಗಳು ಒಂದೊಂದು ರೂ. ಕಡಿಮೆ ಮಾಡಿದ್ದಾರೆ. ಬೇರೆ ರಾಜ್ಯಗಳಿಗೆ ಹೊಲಿಸಿದರೆ ನಮ್ಮಲ್ಲಿ ತೈಲ ಬೆಲೆ ಕಡಿಮೆ ಇದೆ. ಹೀಗಾಗಿ ನಾವು ವ್ಯಾಟ್ ಇಳಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Advertisement
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬಳಿಕ ಮಂಗಳವಾರ ಗುಜರಾತ್ ಸರ್ಕಾರ ಶೇ.4 ವ್ಯಾಟ್ ಕಡಿತಗೊಳಿಸಿತ್ತು. ವ್ಯಾಟ್ ಕಡಿತಗೊಳಿಸಿದ ಪರಿಣಾಮ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 2.93 ರೂ., ಡೀಸೆಲ್ 2.72 ರೂ. ಇಳಿಕೆಯಾಗಿದೆ.
Advertisement
ಮಹಾರಾಷ್ಟ್ರ ಸಚಿವ ಸಂಪುಟ ಮಂಗಳವಾರ ಪೆಟ್ರೋಲ್ ದರವನ್ನು ಲೀಟರ್‍ಗೆ 2 ರೂ. ಮತ್ತು ಡೀಸೆಲ್ ದರವನ್ನು ಲೀಟರ್‍ಗೆ 1 ರೂ. ಇಳಿಸಲು ನಿರ್ಧರಿಸಿ ನಿರ್ಣಯ ಕೈಗೊಂಡಿತ್ತು.
Advertisement
ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಕೆಲ ದಿನಗಳ ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ರಾಜ್ಯ ಸರ್ಕಾರಗಳು ವ್ಯಾಟ್ ಇಳಿಸಬೇಕೆಂದು ಹೇಳಿದ್ದರು.