– ಯುದ್ಧದ ಬದಲು ಭದ್ರತೆಯನ್ನ ಬಿಗಿ ಮಾಡಿಕೊಳ್ಳಬೇಕಿದೆ; ಸಿಎಂ
ಮೈಸೂರು: ಪಾಕಿಸ್ತಾನದ (Pakistan) ಜೊತೆ ಯುದ್ಧದ ಅನಿರ್ವಾಯತೆ ಇಲ್ಲ. ನಾವು ಯಾವತ್ತು ಯುದ್ಧದ ಪರ ಇಲ್ಲ. ಯುದ್ಧದ ಬದಲು ಭದ್ರತೆಯನ್ನ ಬಿಗಿ ಮಾಡಿಕೊಳ್ಳಬೇಕಿದೆ ಎಂದು ಸಿದ್ದರಾಮಯ್ಯ (Siddaramaiah) ಹೇಳಿದರು.
ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಯಾವತ್ತೂ ಶಾಂತಿಯ ಪರ. ಯುದ್ಧದ ಬಗ್ಗೆ ಯೋಚನೆ ಬೇಡ. ಭದ್ರತೆಯನ್ನ ಬಿಗಿ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: AIಯೇ ಅಂತಿಮ ಅಲ್ಲ: ಹೆಚ್.ಆರ್.ರಂಗನಾಥ್
ಕಾಶ್ಮೀರದ (Kashmir) ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ. ಭದ್ರತೆ ಇದೆ ಎಂದು ನಂಬಿಕೊಂಡು ಜನ ಕಾಶ್ಮೀರಕ್ಕೆ ಹೋದರು. ಆದರೆ ಅಲ್ಲಿ ಭದ್ರತೆ ವೈಫಲ್ಯ ಉಂಟಾಗಿದೆ. ಹಾಗಾದರೆ ಇವರು ಮಾಡಿದ್ದು ಬರೀ ಭಾಷಣನಾ? ಈಗ ಏನೇ ಕ್ರಮ ಕೈಗೊಂಡರು? ಹೋದ 26 ಜೀವ ವಾಪಸ್ ತರಲು ಸಾಧ್ಯನಾ. ಪುಲ್ವಾಮ ಘಟನೆ ವಿಚಾರದಲ್ಲಿ ಮುಂದೆ ಏನಾಯಿತು? ಯಾರಿಗೆ ಗೊತ್ತಿದೆ ಹೇಳಿ. ಈಗ ಕೇಂದ್ರ ಸರ್ಕಾರ ಭದ್ರತಾ ವೈಫಲ್ಯವನ್ನು ಒಪ್ಪಿಕೊಂಡಿದೆ. ನಾನು ಮೊದಲೇ ಹೇಳಿದ್ದೆ ನನ್ನ ಮಾತು ನಿಜವಾಗಿದೆ ಎಂದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನ ವಾಪಸ್ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿ, ಕೇಂದ್ರದ ಸೂಚನೆಗೆ ನಾವು ಸಹಕಾರ ಕೊಡುತ್ತೇವೆ. ರಾಜ್ಯದಲ್ಲಿ ಎಷ್ಟು ಜನ ಪಾಕಿಸ್ತಾನ ಪ್ರಜೆಗಳು ಇದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಕೇಂದ್ರದ ಸೂಚನೆಯನ್ನ ನಾವು ಪಾಲಿಸುತ್ತೇವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಜನರು ಇರುವ ಸಾಧ್ಯತೆ ಇದೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಲಬುರಗಿ| ಎಸ್‌ಬಿಐ ಎಟಿಎಂ ದರೋಡೆಕೋರರ ಕಾಲಿಗೆ ಪೊಲೀಸರ ಗುಂಡೇಟು
ಸರ್ವ ಪಕ್ಷ ಸಭೆಗೆ ಪ್ರಧಾನಿ ಹೋಗದ ವಿಚಾರವಾಗಿ ಮಾತನಾಡಿ, ಇಂತಹ ಸಭೆಗಿಂತ ಮಹತ್ವದ ಸಭೆ ಯಾವುದು ಇದೆ ಹೇಳಿ. ಚುನಾವಣಾ ಪ್ರಚಾರದ ಭಾಷಣ ಮುಖ್ಯನಾ, ಸಭೆ ಮುಖ್ಯಾನಾ? ಇವರಿಗೆ ಪರಿಸ್ಥಿತಿಯ ಗಂಭೀರತೆ ಗೊತ್ತಿದ್ಯಾ ಎಂದು ಕಿಡಿಕಾರಿದರು.