ವಿಜಯಪುರ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ (Congress) ನಾಯಕರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ. ಅವರು ಕಳ್ಳರಿದ್ದಾರೆ ಇವರು ಕಳ್ಳರಿದ್ದಾರೆ ಎಂದು ನೀವು ಹಾಗೇ ಮಾಡಬೇಡಿ. ನೀವು ಸ್ವಚ್ಛವಾಗಿರಿ. ಮುಡಾ ವಿಚಾರದಲ್ಲಿ (MUDA Scam) ನೀವು ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಸಲಹೆ ನೀಡಿದರು.ಇದನ್ನೂ ಓದಿ: ಸುನೀತಾ ವಿಲಿಯಮ್ಸ್ ಕರೆತರಲು ಇಂದು ನಭಕ್ಕೆ ನೆಗೆಯಲಿದೆ ಕ್ರ್ಯೂ -9
ಈ ಹಿಂದೆ ಬೊಫೋರ್ಸ್ ವಿಚಾರದಲ್ಲಿ ಎಲ್‌ಕೆ ಅಡ್ವಾನಿಯವರ (L. K. Advani) ಹೆಸರು ಕೇಳಿ ಬಂದಿತ್ತು. ಕೇವಲ 50 ಲಕ್ಷ ರೂ. ಆರೋಪ ಬಂದಿತ್ತು. ಎಲ್‌ಕೆಎ ಎಂದು ಜೈನ್ ಡೈರಿಯಲ್ಲಿ ಬರೆಯಲಾಗಿತ್ತು. ಈ ಆರೋಪಕ್ಕೆ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಜೊತೆಗೆ ಇದರಿಂದ ಮುಕ್ತವಾಗುವವರೆಗೆ ಸಂಸತ್ ಪ್ರವೇಶ ಮಾಡುವುದಿಲ್ಲ ಎಂದು ನಿರ್ಧಾರ ಮಾಡಿದ್ದರು.
ಅದು ಆದರ್ಶ. ರಾಜೀನಾಮೆ ನೀಡುವ ಮೂಲಕ ಸಿದ್ದರಾಮಯ್ಯ ರಾಜ್ಯಕ್ಕೆ ಹೊಸ ಆದರ್ಶವಾಗಬೇಕು. ಇಲ್ಲವಾದರೆ ಅವರು ಸಹ ಯಡಿಯೂರಪ್ಪ ಅವರ ಹಾಗೇ ಆಗುತ್ತಾರೆ ಎಂದರು. ಅವರು ಸಿಎಂ ಆಗಿರೋದು ತನಿಖೆ ಮೇಲೆ ಪರಿಣಾಮ ಬೀರುತ್ತದೆ. ಅಧಿಕಾರಿಗಳು ಅವರ ವಿರುದ್ಧ ರಿಪೋರ್ಟ್ ಕೊಟ್ಟರೆ ವರ್ಗಾವಣೆ ಇಲ್ಲ ಸಸ್ಪೆಂಡ್ ಮಾಡುತ್ತಾರೆ. ಈ ಭಯದಲ್ಲಿ ಪಾರದರ್ಶಕವಾಗಿ ನಿಷ್ಪಕ್ಷಪಾತವಾಗಿ ಸರಿಯಾಗಿ ತನಿಖೆ ಮಾಡಲಾಗುವುದಿಲ್ಲ. ಸಿಎಂ ರಾಜೀನಾಮೆ ನೀಡಿದರೆ ನಿಷ್ಪಕ್ಷಪಾತವಾದ ತನಿಖೆ ಮಾಡಬಹುದು ಎಂದರು.
ಸಿಎಂ ಹಿಂದೆ ಅಹಿಂದ ಸಂಘಟನೆ ಮಾಡಿದ್ದರು. ಆಗ ಅವರಿಗೆ ನಾನು ಬೆಂಬಲ ಕೊಟ್ಟು ಭಾಗಿಯಾಗಿದ್ದೆ. ಈಗಲೇ ಅವರು ಮತ್ತೆ ಅಹಿಂದ ಸಂಘಟನೆ ಮಾಡಿದರೆ ಬೆಂಬಲ ಕೊಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ವಿರುದ್ಧ ಕೇಸ್ ದಾಖಲಿಸಲು ಕೋರ್ಟ್ ಆದೇಶ ಹಿನ್ನೆಲೆ ಮಾತನಾಡಿ, ನ್ಯಾಯಾಲಯದ ಆದೇಶ ಪಾಲಿಸಬೇಕು. ಎಲ್ಲರಿಗೂ ಅನ್ವಯವಾಗುತ್ತದೆ. ನನಗೂ ಅಷ್ಟೇ, ಪ್ರಧಾನ ಮಂತ್ರಿಗಳಿಗೂ ಅಷ್ಟೇ, ರಾಷ್ಟ್ರಪತಿಗಳಿಗೂ ಅಷ್ಟೇ, ನೆಲಕ್ಕೆ ನಾವು ಗೌರವ ಕೊಡಬೇಕು ಎಂದು ಪ್ರತಿಕ್ರಿಯಿಸಿದರು.
ಎಲ್ಲಾ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ತೆಗೆದುಕೊಂಡಿವೆ. ಚುನಾವಣಾ ಬಾಂಡುಗಳನ್ನು ಕಾಂಗ್ರೆಸ್ ತೆಗೆದುಕೊಂಡಿದೆ. ಲಾಲು ಪ್ರಸಾದ್ ಯಾದವ್ ತೆಗೆದುಕೊಂಡಿದ್ದಾರೆ. ಅಖಿಲೇಶ್ ಯಾದವ್ ತೆಗೆದುಕೊಂಡಿದ್ದಾರೆ, ಬಿಜೆಪಿ (BJP), ಕಾಂಗ್ರೆಸ್ (Congress) ಎಲ್ಲರೂ ತೆಗೆದುಕೊಂಡಿದ್ದಾರೆ. ಹಾಗಾದರೆ ರಾಹುಲ್ ಗಾಂಧಿ ರಾಜೀನಾಮೆ ಕೊಡುತ್ತಾರಾ ಎಂದು ಕಾಂಗೆಸ್ಸಿಗರ ವಿರುದ್ದ ಕಿಡಿ ಕಾರಿದರು.
ಚುನಾವಣಾ ಬಾಂಡ್ ಯಾರು ತೆಗೆದುಕೊಳ್ಳಬಾರದೆಂದು ಸುಪ್ರೀಂ ಕೋರ್ಟ್ (Supreme Court) ತೀರ್ಪು ನೀಡಿದೆ. ಈಗ ಬಾಂಡ್ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿಗೆ ಹೆಚ್ಚು ಹಣ ಕೊಟ್ಟಿರುವ ಕಾರಣ ಅವರಿಗೆ ತೊಂದರೆಯಾಗಿದೆ ಎಂದರು.ಇದನ್ನೂ ಓದಿ: ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ