ಚಿಕ್ಕಮಗಳೂರು: ಹೋದಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ, ರಕ್ತದಲ್ಲಿ ಬರೆದುಕೊಡ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳುತ್ತಿರುತ್ತಾರೆ. ಹೀಗಾಗಿ ಬಿಎಸ್‍ವೈ ಅವರಲ್ಲಿ ಎಷ್ಟು ರಕ್ತವಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.
ಮೂಡಿಗೆರೆಯಲ್ಲಿ ಮಾತನಾಡಿದ ಅವರು, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಸುಳ್ಳು ಹೇಳಿದ್ರೆ ಏನೂ ಆಗುವುದಿಲ್ಲ. ಜನ ಅಧಿಕಾರ ನೀಡಿದಾಗ ಏನು ಮಾಡಿದ್ರು ಅನ್ನೋದ್ನ ನೋಡ್ತಾರೆ. ಹಾಗೇ ನೋಡಿದ್ರೆ, ಅವರು ಜೈಲಿಗೆ ಹೋಗಿದ್ರು ಅನ್ನೋದೆ ದೊಡ್ಡದು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ದಕ್ಷ, ಪ್ರಾಮಾಣಿಕ ಸರ್ಕಾರ ನೀಡುತ್ತೆನೆಂದು ರಕ್ತದಲ್ಲಿ ಬರೆದುಕೊಡ್ತೇನೆ: ಬಿಎಸ್‍ವೈ
ಅವರ ಆಡಳಿತದ ಅವಧಿಯಲ್ಲಿ ಏಳೆಂಟು ಜನ ಜೈಲಿಗೆ ಹೋಗಿದ್ದು, ಸದನದಲ್ಲಿ ಬ್ಲೂಫಿಲಂ ನೋಡಿದ್ರು ಅನ್ನೋದೆ ಜನರಿಗೆ ನೆನಪಾಗೋದು ಎಂದು ಬಿಜೆಪಿ ಹಾಗೂ ಬಿಎಸ್‍ವೈ ವಿರುದ್ಧ ಲೇವಡಿ ಮಾಡಿದರು. ಇದನ್ನೂ ಓದಿ: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ – ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲ್
ಕೋಮುಭಾವನೆ ಕೆರಳಿಸುವಂತಹ ಎಲ್ಲಾ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಆ ಸಂಘಟನೆ ಯಾವುದೇ ಧರ್ಮಕ್ಕೆ ಸೇರಿರಲಿ. ಆ ಸಂಘಟನೆಗಳು ಪಿಎಫ್‍ಐ, ಬಜರಂಗದಳ, ಶ್ರೀರಾಮಸೇನೆ ಯಾವುದೇ ಆಗಿರಬಹುದು ಎಲ್ಲದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಸಿಎಂ ಸಿದ್ದರಾಮಯ್ಯ ಹೇಳಿದರು.
ಯಾರೂ ಸಾಯಬಾರದು. ಎಲ್ಲರ ಜೀವವೂ ಅಮೂಲ್ಯವಾದದ್ದು. ಸತ್ತವರ ಕುಟುಂಬದ ಬಗ್ಗೆ ನಮಗೆ ಅನುಕಂಪ ಇದೆ. ಅವರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳು ಸಿಗಲಿದೆ. ಆದ್ರೆ ಈ ಬಿಜೆಪಿಯವ್ರು ಅಲ್ಲಿಗೆ ಹೋಗಿ ಗಲಾಟೆ ಮಾಡುತ್ತಿದ್ದಾರೆ. ಅವರಿಗೆ ಗಲಾಟೆ ಮಾಡಲು ಹೇಳಿದ್ದು ಯಾರು? ಅವರೇನು ಹಿಂದುತ್ವವನ್ನ ಗುತ್ತಿಗೆ ಪಡೆದಿದ್ದಾರಾ? ನಾವೆಲ್ಲಾ ಹಿಂದುಗಳಲ್ವಾ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಕೂಲಂಕುಶವಾಗಿ ಪರಿಶೀಲಿಸಿ ಅವುಗಳನ್ನ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದ್ರು. ಇದನ್ನೂ ಓದಿ: ಕತಾರ್ ಟು ಕುವೈತ್ ಇದೊಂದು ರಕ್ತದ ಕಥೆ: ಕನ್ನಡಿಗ ದಂಪತಿಯ ಮನಗೆದ್ದ ಕೇರಳಿಗ!