ಬೆಂಗಳೂರು: ರಾಜ್ಯದಲ್ಲಿ 1 ಅನ್ನಭಾಗ್ಯ ಯೋಜನೆಯ ಚರ್ಚೆ ತಾರಕಕ್ಕೇರಿದ್ದು, ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಾಕ್ಷಿ ಸಮೇತ ತಿರುಗೇಟು ಕೊಟ್ಟಿದ್ದಾರೆ.
ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ @CTRavi_BJP ಸವಾಲು ಹಾಕಿದ್ದರು.
ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ.
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ… pic.twitter.com/y6uT7eLXlw
— Siddaramaiah (@siddaramaiah) June 16, 2023
Advertisement
ಎಫ್‍ಸಿಐ (FCI) ಪತ್ರ ಹಾಕಿ ಟ್ವೀಟ್ ಮಾಡಿರುವ ಅವರು, ಸಿ.ಟಿ ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ. ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಬಿಜೆಪಿಗರು ಆಗ್ರಹಿಸಬೇಕು. ಅದನ್ನು ಬಿಟ್ಟು ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಟ್ವಿಟ್ಟರ್‌ನಲ್ಲಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಿವಕುಮಾರ್ ಅಣ್ಣ.. ಭರವಸೆ ಕೊಟ್ಟಿರೋದು ನೀವು, ಮೋದಿ ಅಲ್ಲ: ಅಶೋಕ್ ಕಿಡಿ
Advertisement
Advertisement
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿದ್ದಾರೆ ಎಂದು ಟ್ವೀಟ್‍ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
Advertisement
ಜುಲೈ ತಿಂಗಳಿಂದ ರಾಜ್ಯ ಸರ್ಕಾರ ಅನ್ನಭಾಗ್ಯ (Anna Bhagya) ಯೋಜನೆಯ ಅಕ್ಕಿಯನ್ನು ಕೊಡುಲು ನಿರ್ಧರಿಸಿತ್ತು. ಈ ಬಗ್ಗೆ ಎಫ್‍ಸಿಐನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಈಗ ಎಫ್‍ಸಿಐ ಅಕ್ಕಿಯನ್ನು ನೀಡಲು ನಿರಾಕರಿಸಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದರು. ಈ ವಿಚಾರವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಭಾರತೀಯ ಆಹಾರ ನಿಗಮ (FCI) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕರಾರು ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಸವಾಲು ಹಾಕಿದ್ದರು. ಇದನ್ನೂ ಓದಿ: ಬೃಹತ್ ಗಾತ್ರದ ಕಡಿದ ಮರ ತಬ್ಬಿಕೊಂಡು ಸೆಕ್ಸ್ – ವಿಕೃತ ಕಾಮಿ ಅರೆಸ್ಟ್