Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‌ವೈ, ಹೆಚ್‌ಡಿಕೆ ಸಿಎಂ ಆಗಿದ್ದಾಗ ವಕ್ಫ್‌ ಬೋರ್ಡ್‌ಗೆ ರೈತರ ಆಸ್ತಿ ಖಾತೆ ಬದಲಿಸಿದ ದಾಖಲೆ ಬಿಡ್ತೀವಿ: ವಿಜಯೇಂದ್ರಗೆ ಸಿಎಂ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‌ವೈ, ಹೆಚ್‌ಡಿಕೆ ಸಿಎಂ ಆಗಿದ್ದಾಗ ವಕ್ಫ್‌ ಬೋರ್ಡ್‌ಗೆ ರೈತರ ಆಸ್ತಿ ಖಾತೆ ಬದಲಿಸಿದ ದಾಖಲೆ ಬಿಡ್ತೀವಿ: ವಿಜಯೇಂದ್ರಗೆ ಸಿಎಂ ಸವಾಲ್

Bengaluru City

ಬಿಎಸ್‌ವೈ, ಹೆಚ್‌ಡಿಕೆ ಸಿಎಂ ಆಗಿದ್ದಾಗ ವಕ್ಫ್‌ ಬೋರ್ಡ್‌ಗೆ ರೈತರ ಆಸ್ತಿ ಖಾತೆ ಬದಲಿಸಿದ ದಾಖಲೆ ಬಿಡ್ತೀವಿ: ವಿಜಯೇಂದ್ರಗೆ ಸಿಎಂ ಸವಾಲ್

Public TV
Last updated: November 2, 2024 11:14 pm
Public TV
Share
4 Min Read
SIDDARAMAIAH BY VIJAYENDRA
SHARE

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಮತ್ತು ಹೆಚ್‌.ಡಿ.ಕುಮಾರಸ್ವಾಮಿ ಸಿಎಂಗಳಾಗಿದ್ದಾಗ ರೈತ ಕುಟುಂಬಗಳ ಆಸ್ತಿಗಳನ್ನು ವಕ್ಫ್‌ ಬೋರ್ಡ್‌ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿಎಂ, ಮಾನ್ಯ ವಿಜಯೇಂದ್ರ ಅವರೇ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ. ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ ಎಂದು ಸಿಎಂ ಟಾಂಗ್‌ ಕೊಟ್ಟಿದ್ದಾರೆ.

ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್.ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ? ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ ಎಂದು ಚಾಟಿ ಬೀಸಿದ್ದಾರೆ.

ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ಪೂಜ್ಯ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ. ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ 4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು 45,000 ಕೋಟಿ ರೂ. ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ? ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿದ್ದಾರೆ.

ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ. ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್‌ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು..!! ಅದಕ್ಕೆ ಸಿದ್ಧರಾಗಿರಿ ಎಂದು ಎಚ್ಚರಿಸಿದ್ದಾರೆ.

TAGGED:B.Y vijayendrasiddaramaiahಬಿ.ವೈ.ವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
2 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
3 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
3 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
3 hours ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
3 hours ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?