Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಸರಸಂಘಚಾಲಕ ಹುದ್ದೆಗೆ ದಲಿತನನ್ನು ನೇಮಕ‌ ಮಾಡಲಿ: ಸಿದ್ದರಾಮಯ್ಯ ಸವಾಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | RSS ಸರಸಂಘಚಾಲಕ ಹುದ್ದೆಗೆ ದಲಿತನನ್ನು ನೇಮಕ‌ ಮಾಡಲಿ: ಸಿದ್ದರಾಮಯ್ಯ ಸವಾಲ್‌

Bengaluru City

RSS ಸರಸಂಘಚಾಲಕ ಹುದ್ದೆಗೆ ದಲಿತನನ್ನು ನೇಮಕ‌ ಮಾಡಲಿ: ಸಿದ್ದರಾಮಯ್ಯ ಸವಾಲ್‌

Public TV
Last updated: December 6, 2023 5:37 pm
Public TV
Share
2 Min Read
cm siddaramaiah 1
SHARE

ಬೆಂಗಳೂರು: ಜಾತಿ ಕಾರಣಕ್ಕೆ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌ (Goolihatti Shekhar) ಅವರನ್ನು ಆರ್‌ಎಸ್‌ಎಸ್‌ ಕಚೇರಿಗೆ ಪ್ರವೇಶ ನಿರಾಕರಿಸಲಾಗಿದೆ. ಇದು ಅಸ್ಪೃಶ್ಯತೆ ಆಚರಣೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ (Siddaramaiah), ಶೂದ್ರರು ಮತ್ತು ದಲಿತರಿಗೆ ಆರ್‌ಎಸ್‌ಎಸ್ (RSS) ಗರ್ಭಗುಡಿಗೆ ಪ್ರವೇಶ ಇಲ್ಲ. ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ (B.L.Santosh) ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ. ಇದನ್ನೂ ಓದಿ: ನನಗಾದ ನೋವು ಹೇಳಿದ್ದೇನೆ, RSS ಬಗ್ಗೆ ಗೌರವವಿದೆ: ಗೂಳಿಹಟ್ಟಿ ಶೇಖರ್ ಸ್ಪಷ್ಟನೆ

1 2

ಬಿಜೆಪಿ ಮತ್ತು ಆರ್‌ಎಸ್‌ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ.

ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ‌ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ. ಇದನ್ನೂ ಓದಿ: ಕಲಾಪಕ್ಕೆ ಬಾರದ ಸಚಿವ ಜಮೀರ್ – ಪರಿಷತ್‌ನಲ್ಲಿ ಗದ್ದಲ

mla shekhar goolihatti

ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ. ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ. ಈಗ ಮತ್ತೆ ಹೇಳುತ್ತೇನೆ ‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ. ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ.

ಆರ್‌ಎಸ್‌ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ. ಈವರೆಗೆ ಒಬ್ಬನೇ ಒಬ್ಬ ತಳಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್‌ಎಸ್‌ಎಸ್ ತನ್ನ ‌ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು. ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? ಇದನ್ನೂ ಓದಿ: ರೈತರಿಗೆ ಮಧ್ಯಂತರ ಬರ ಪರಿಹಾರವಾಗಿ 2,000 ರೂ. ಪರಿಹಾರ ನೀಡಲಾಗಿದೆ: ಕೃಷ್ಣಭೈರೇಗೌಡ

bjp rss

‘ಹಿಂದೂಗಳೆಲ್ಲ ಒಂದು’ ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್‌ಎಸ್‌ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ‌ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ “ಹಿಂದೂ..ಒಂದು” ಎಂದು ಸುಳ್ಳು ಹೇಳಿ ಜನರನ್ನು ನಂಬಿಸಿ‌ ಮೋಸ ಮಾಡುವುದನ್ನು ನಿಲ್ಲಿಸಬೇಕು.

ತನ್ನ ‘ಹೊಡಿ ಬಡಿ’ ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಛವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು‌ ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು‌ ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ.

TAGGED:congressrsssiddaramaiahಆರ್‍ಎಸ್‍ಎಸ್ಕಾಂಗ್ರೆಸ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
5 minutes ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
17 minutes ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
52 minutes ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
55 minutes ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
1 hour ago
Pakistan Cricket Team
Cricket

T20 World Cup | ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ನಿರ್ಧಾರ ಪೆಂಡಿಂಗ್‌ ಇಟ್ಟ ಪಾಕ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?