Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ

Bengaluru City

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ

Public TV
Last updated: March 7, 2026 5:18 pm
Public TV
Share
2 Min Read
Siddaramaiah
SHARE

ಬೆಂಗಳೂರು: ಎಲ್‌ಪಿಜಿ ದರ ಏರಿಸುವ ಮೂಲಕ ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ, ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಎಲ್‌ಪಿಜಿ ದರ ಏರಿಕೆ ಮಧ್ಯಮ ವರ್ಗದ ಕುಟುಂಬಗಳಿಗೆ ವೆಚ್ಚ ದುಬಾರಿಯಾಗಲಿದೆ. ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ. ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿವೆ. ಈ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್‌ ಮಾತು

ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಸುಮಾರು 60 ರೂ.ಯಷ್ಟು ಹೆಚ್ಚಿಸಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆಯ ವೆಚ್ಚ ದುಬಾರಿಯಾಗಲಿದೆ. ಈ ಏರಿಕೆ ಅನಿವಾರ್ಯ ಕ್ರಮವೇನಲ್ಲ, ಇದು ಶರಣಾಗತಿಯನ್ನೇ ದೇಶದ ಕಾರ್ಯತಂತ್ರವೆಂದು ತಪ್ಪಾಗಿ ತಿಳಿದುಕೊಂಡ ವಿದೇಶಾಂಗ ನೀತಿಯ ಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಮಾತುಗಳಿಗೆ ಮೂಕರಂತೆ ತಲೆಯಾಡಿಸುವ ಮೂಲಕ ಭಾರತದ ವ್ಯೂಹಾತ್ಮಕ ಸ್ವಾತಂತ್ರ‍್ಯವನ್ನು ಬೇರೊಂದು ರಾಷ್ಟ್ರದ ಪಾದದಡಿ ಇಟ್ಟಿದ್ದಾರೆ ಎಂದಿದ್ದಾರೆ.

ರಷ್ಯಾ ಹಾಗೂ ಇರಾನ್‌ನಂತಹ ದೇಶಗಳೊಂದಿಗಿನ ಭಾರತದ ದೀರ್ಘಕಾಲೀನ ಇಂಧನ ಸಹಭಾಗಿತ್ವವನ್ನು ಹಾಳುಗೆಡವಿದ್ದಾರೆ. ಇವು ಹಲವು ದಶಕಗಳಿಂದ ಭಾರತೀಯರಿಗೆ ಇಂಧನ ಸ್ಥಿರತೆಯನ್ನು ಖಾತ್ರಿಪಡಿಸಿದ ರಾಷ್ಟ್ರಗಳು ಎಂಬುದನ್ನು ಪ್ರಧಾನಿಗಳು ಮರೆತಂತಿದೆ. ಪಂಡಿತ್ ಜವಾಹರಲಾಲ್ ನೆಹರೂರವರ ಪ್ರಕಾರ “ವಿದೇಶಾಂಗ ನೀತಿಯು ಆರ್ಥಿಕ ನೀತಿಯ ಪರಿಣಾಮವಾಗಿದೆ.” ನೆಹರೂ ಅವರು ಏಳೆಂಟು ದಶಕಗಳ ಹಿಂದೆಯೇ ನೀಡಿದ್ದ ಎಚ್ಚರಿಕೆ ಇಂದು ಅಕ್ಷರಶಃ ಸತ್ಯವಾಗಿದೆ ಎಂದು ತಿಳಿಸಿದ್ದಾರೆ.

ರಾಜತಾಂತ್ರಿಕತೆ ಎನ್ನುವುದು ಕಾರ್ಯತಂತ್ರವಾಗದೆ, ಪ್ರದರ್ಶನದ ವಸ್ತುವಾಗಿ ಮಾರ್ಪಟ್ಟಾಗ, ಅದಕ್ಕೆ ಅನಿವಾರ್ಯವಾಗಿ ಬಡವರು ಮತ್ತು ಮಧ್ಯಮ ವರ್ಗದ ಜನರು ಬಲಿಯಾಗುತ್ತಾರೆ. ಇತ್ತೀಚೆಗೆ ತಮ್ಮ ಪುಸ್ತಕದಲ್ಲಿ ಮಾಜಿ ಸೇನಾಧಿಕಾರಿ ಜನರಲ್ ಎಂ.ಎಂ. ನರವಣೆ ಅವರು ಭಾರತದ ವಿದೇಶಾಂಗ ನೀತಿ ನಿರ್ಧಾರಗಳಲ್ಲಿ ಸಾಂಸ್ಥಿಕ ಸಮಾಲೋಚನೆ ಮತ್ತು ವ್ಯೂಹಾತ್ಮಕ ತಿಳುವಳಿಕೆಯ ಕೊರತೆಯ ಬಗ್ಗೆ ಗಂಭೀರ ಆತಂಕಗಳನ್ನು ಎತ್ತಿದ್ದರು. ಇದು ಪ್ರಧಾನಮಂತ್ರಿಗೆ ರಾಜತಾಂತ್ರಿಕ ನಿಲುವು ಮತ್ತು ಅದರ ಆರ್ಥಿಕ ಪರಿಣಾಮಗಳ ಮೂಲಭೂತ ತಿಳುವಳಿಕೆಯ ಕೊರತೆ ಇದೆ ಎಂಬ ಅನುಮಾನವನ್ನು ಖಚಿತಪಡಿಸುವಂತಿದೆ ಎಂದು ತಿಳಿಸಿದ್ದಾರೆ.

ಭಾರತದ ಇಂದಿನ ವಿದೇಶಾಂಗ ನೀತಿಯ ವೈಫಲ್ಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಫ್‌ಸ್ಟೀನ್ ಫೈಲ್ಸ್‌ನ ಬಗೆಗಿನ ಭಯ ಮತ್ತು ರಾಜತಾಂತ್ರಿಕ ತೀರ್ಮಾನಗಳಲ್ಲಿನ ಅಜ್ಞಾನವನ್ನು ತೋರುತ್ತದೆ. ಪ್ರಧಾನಿಗಳು ತಮ್ಮ ರಾಜತಾಂತ್ರಿಕ ವೈಫಲ್ಯಕ್ಕೆ ಕೋಟ್ಯಂತರ ಭಾರತೀಯರು ಯಾಕೆ ಬೆಲೆ ತೆರಬೇಕು ಎನ್ನುವುದನ್ನು ತಿಳಿಸಲಿ. ಜಾಗತಿಕ ಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿಯವರು ಬಹಿರಂಗವಾಗಿ ದೇಶದ ಜನರ ಕ್ಷಮೆಯಾಚಿಸಲಿ ಮತ್ತು ರಾಜೀನಾಮೆ ನೀಡಲಿ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

TAGGED:bengalurulpgsiddaramaiahಎಲ್‍ಪಿಜಿಕೇಂದ್ರ ಸರ್ಕಾರಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
3 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
3 hours ago
Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
4 hours ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
5 hours ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
5 hours ago
Donald Trump 1 2
Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?