Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ

Bengaluru City

ಮುಂದಿನ 5 ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ

Public TV
Last updated: December 1, 2023 3:22 pm
Public TV
Share
2 Min Read
WORLD AIDS DAY
SHARE

ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯ ಏಡ್ಸ್ (AIDS) ಮುಕ್ತವಾಗುವ ನಿಟ್ಟಿನಲ್ಲಿ ನಾವೆಲ್ಲರು ಜಾಗೃತಿ ಮೂಡಿಸೋಣ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕರೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ (World AIDS Day 2023) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ಇತ್ತೀಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು ಎಂದರು.

ವಿಶ್ವ ಏಡ್ಸ್ ದಿನ – 2023

ಏಡ್ಸ್ ರೋಗದ ಹರಡುವಿಕೆ ಮತ್ತು ತಡೆಗಟ್ಟುವಿಕೆಯ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಆರೋಗ್ಯಯುತ ಅಭ್ಯಾಸಗಳನ್ನು ರೂಢಿಸಿಕೊಂಡು, ಸುಂದರ ಬದುಕು ಕಟ್ಟಿಕೊಳ್ಳುವ ದಿಸೆಯಲ್ಲಿ ಎಲ್ಲರೂ ಪ್ರಯತ್ನಿಸಬೇಕು.

ಏಡ್ಸ್ ಎಂಬ ಮಾರಕ ರೋಗಕ್ಕೆ ಎಚ್ಚರಿಕೆಯೇ ಮದ್ದು. ಜಾಗ್ರತೆಯಿರಲಿ #WorldAIDSDay2023 pic.twitter.com/660SU6Ts5X

— CM of Karnataka (@CMofKarnataka) December 1, 2023

2015-2020ರವರೆಗೆ ಏಡ್ಸ್ ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ ಆರೋಗ್ಯ ಇಲಾಖೆಯ ಹೊಣೆಯಾಗಿರದೇ, ಇಡೀ ಸಮಾಜದ ಹೊಣೆಯಾಗಿದೆ. ಈ ಸಾಂಕ್ರಾಮಿಕ ರೋಗ ಪೂರ್ಣ ವಾಸಿಯಾದರೆ ಏಡ್ಸ್ ಪೀಡಿತರು ನೆಮ್ಮದಿಯ ಜೀವನ ನಡೆಸಲು ಸಾಧ್ಯ. ಇನ್ನು ಐದಾರು ವರ್ಷಗಳಲ್ಲಿ ಸೊನ್ನೆಯ ದಿನ ಬರಲಿ ಎಂದು ಹಾರೈಸುತ್ತೇನೆ. ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ ಎಂದು ಹೇಳಿದರು.

ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಅಂತ. ಆದರೆ ಹಾಗಾಗುವುದಿಲ್ಲ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಆಮೇಲೆ ಅನುಭವಿಸುವುದಕ್ಕಿಂತ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾಮೂಹಿಕವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು ಅಂತ ಕರೆ ಕೊಟ್ಟರು.

ಮುಖ್ಯಮಂತ್ರಿ @siddaramaiah ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ "ವಿಶ್ವ ಏಡ್ಸ್ ದಿನ – 2023" ಮತ್ತು 25ನೇ ರಜತ ಮಹೋತ್ಸವವನ್ನು ಉದ್ಘಾಟಿಸಿದರು.#WorldAIDSDay pic.twitter.com/0qOQggEuja

— CM of Karnataka (@CMofKarnataka) December 1, 2023

ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು. ಸಮುದಾಯಗಳು ಮುನ್ನಡೆಸಲಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷದ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 2017 ರಲ್ಲಿ ಏಡ್ಸ್ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ ಎಂದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಏಡ್ಸ್ ತಗಲಿರುವ ವ್ಯಕ್ತಿಯೊಂದಿಗೆ ಮಾತನಾಡಿದ ಸಿಎಂ, ಕಾಯಿಲೆ ಬಂದ ನಂತರ 26 ವರ್ಷಗಳ ಕಾಲ ಬದುಕಿದ್ದಾರೆ ಹಾಗೂ ಧೈರ್ಯವಾಗಿದ್ದಾರೆ ಎಂದು ಸಭಿಕರಿಗೆ ತಿಳಿಸಿದರು. ಆಂಜಿಯೋಪ್ಲಾಸ್ಟಿಯಾಗಿದ್ದರೂ ಧೈರ್ಯವಾಗಿ ಅದನ್ನು ಎದುರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಟ ಪ್ರೇಮ್, ನಟಿ ಸಂಜನಾ ಗಲ್ರಾನಿ ಸೇರಿ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

TAGGED:aidsbengalurusiddaramaiahಏಡ್ಸ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
2 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
2 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
3 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
4 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?