– ಬಿಹಾರ ಚುನಾವಣೆ ಹಿನ್ನೆಲೆ ಕೇಂದ್ರ ಸಮೀಕ್ಷೆಗೆ ಮುಂದಾಗಿದೆ; ಸಿದ್ದರಾಮಯ್ಯ
ಬೆಂಗಳೂರು: ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ (Caste Census) ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. 50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.
ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು (Rahul Gandhi) ಕೂಡಾ ಇದನ್ನೇ ಆಗ್ರಹಿಸಿದ್ದರು. ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು. ಅಲ್ಲದೇ ಜಾತಿ ಜನಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ಇದನ್ನೂ ಓದಿ: ನೀವು ಬರೋದು ಬೇಡ – ತನ್ನ ಪ್ರಜೆಗಳನ್ನೇ ದೇಶಕ್ಕೆ ಸೇರಿಸದ ಪಾಕ್
ಮುಖ್ಯವಾಹಿನಿಗೆ ತರಲು ಅನುಕೂಲ
ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿಗಣತಿಯೊಂದಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: WAVES 2025: ನರೇಂದ್ರ ಮೋದಿ ಫೈಟರ್, ಯಾವ್ದೇ ಸವಾಲು ಎದುರಿಸುತ್ತಾರೆ- ರಜನಿಕಾಂತ್
ಬಿಹಾರಕ್ಕಾಗಿ ಸಮೀಕ್ಷೆ
ಈ ರೀತಿಯ 2015ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ 1.33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ. ಇದರಿಂದ ಪ್ರೇರಿತವಾಗಿ ಮತ್ತು ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದರು.
ಮೇ 9ಕ್ಕೆ ಸಭೆ
ಪ್ರಸಕ್ತ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಮೇ 9ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿಲಾಗುವುದು. ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಅವರು ತಿಳಿಸಿದರು. ಇದನ್ನೂ ಓದಿ: ಕುಡುಪು ಪ್ರಕರಣದಲ್ಲಿ ಪೊಲೀಸರು ಅಮಾಯಕರನ್ನ ಫಿಕ್ಸ್ ಮಾಡಲು ಹೊರಟಿದ್ದಾರೆ: ಭರತ್ ಶೆಟ್ಟಿ
50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ(5)ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರವನ್ನು ಒತ್ತಾಯಿಸುವುದಾಗಿ ಹೇಳಿದರು.
ಬಿಜೆಪಿ ವಿರೋಧಿಸಿತ್ತು
ಕೇವಲ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾರಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿಗಣತಿ ಮಾಡುವಾಗ ಸಾಮಾಜಿಕ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಸಿಂಗಾಪುರದಲ್ಲಿ ಮೇಘಾ ಶೆಟ್ಟಿ- ಸ್ಟೈಲಿಶ್ ಲುಕ್‌ನಲ್ಲಿ ನಟಿ
ಹೆದರಿಸಿದ್ದ ಹೆಚ್‌ಡಿಕೆ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು (H D Kumaraswamy) ಜಾತಿಗಣತಿ ಹಾಗೂ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಾಡಿ ಹೊಗಳಿದ್ದು, ರಾಜ್ಯ ಸರ್ಕಾರದ ಸಮೀಕ್ಷೆಗೆ ಯಾವುದೇ ಪಾವಿತ್ರ‍್ಯತೆ ಇಲ್ಲ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿಗಳು ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದಾಗ ಜಾತಿಗಣತಿ ವರದಿ ಪಡೆಯಲು ದಿನಾಂಕ ನಿಗದಿ ಮಾಡಿದಾಗ ಅವರನ್ನು ಅಮಾನತು ಮಾಡುವುದಾಗಿ ಹೆದರಿಸಿ ವರದಿಯನ್ನು ಪಡೆಯಲಿಲ್ಲ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಮೀಸಲಾತಿ ಏರಿಕೆಯಾಗಬೇಕಾದರೆ ಸಂವಿಧಾನಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಎಷ್ಟು ಪ್ರಮಾಣದಲ್ಲಿ ಏರಿಕೆ ಮಾಡಬೇಕೆಂದು ತಿಳಿಸಬಹುದು. ಆಗ ಸಂವಿಧಾನ ತಿದ್ದುಪಡಿ ಮಾಡಿ ಏರಿಕೆ ಮಾಡಬಹುದು ಎಂದರು. ಇದನ್ನೂ ಓದಿ: ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ
ರಾಜ್ಯ ಸರ್ಕಾರದ ಸಮೀಕ್ಷೆ ಅವೈಜ್ಞಾನಿಕ ಎಂದು ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಹಾಗು ಧರ್ಮೇಂದ್ರ ಪ್ರಧಾನ್ ಅವರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಬೆಂಬಲಿಗರು ಬಿಹಾರದಲ್ಲಿ ನಡೆಸಿರುವ ಸಮೀಕ್ಷೆ ಬಗ್ಗೆ ಅವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರಗಳಿಗೆ ಜಾತಿ ಅಥವಾ ಜನಗಣತಿ ಮಾಡಲು ಹಕ್ಕಿಲ್ಲ ಎಂದು ಸಂವಿಧಾನದಲ್ಲಿ ಹೇಳಿದೆಯೇ? ರಾಜ್ಯ ಸರ್ಕಾರದಲ್ಲಿ ದಲಿತರೂ ಸೇರಿ 51% ಮೀಸಲಾತಿ ಇದೆ. ಹಿಂದೆ ಇದ್ದ 50% ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕೆಂದಿದೆ. ನಮ್ಮದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಾಗಿದ್ದು ಕೇಂದ್ರವೂ ಅದನ್ನೇ ಮಾಡಲಿ ಎಂದು ಒತ್ತಾಯಿಸುತ್ತೇವೆ ಎಂದರು.
93% ಜನಸಂಖ್ಯೆ ಸಮೀಕ್ಷೆಗೆ ಒಳಪಟ್ಟಿದ್ದಾರೆ
ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ 5.90 ಕೋಟಿ ಜನರನ್ನು ಒಳಪಡಿಸಲಾಗಿದೆ. 93% ಜನಸಂಖ್ಯೆ ಸಮೀಕ್ಷೆಗೆ ಒಳಪಟ್ಟಿದ್ದು, 100% ಸಮೀಕ್ಷೆ ನಡೆಸಲು ಸಾಧ್ಯವಿಲ್ಲ. ಮುಂದಿನ ಸಚಿವ ಸಂಪುಟದಲ್ಲಿ ಅಭಿಪ್ರಾಯ ಪಡೆದು ಚರ್ಚೆ ಮಾಡಿ, ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಬಜೆಟ್ ರೂಪಿಸುವಾಗ ಇದನ್ನು ಆಧಾರವಾಗಿಟ್ಟುಕೊಂಡು ಮಾಡಲಾಗುವುದು ಎಂದರು. ಇದನ್ನೂ ಓದಿ: ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ, ಬುಡ ಸಮೇತ ಕಿತ್ತುಹಾಕ್ತೀವಿ: ಅಮಿತ್ ಶಾ ಗುಡುಗು
ಬಿಜೆಪಿಯವರು 4 ವರ್ಷ ಅಧಿಕಾರದಲ್ಲಿದ್ದರೂ ಸಮೀಕ್ಷೆಯ ವರದಿಯನ್ನು ಪಡೆಯಲಿಲ್ಲ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ದೊರಕಿಸಲು, ಸಮಾನತೆಯನ್ನು ತರಲು ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಪಾಲಿರಬೇಕು ಎಂಬ ಉದ್ದೇಶದಿಂದ ಸಮೀಕ್ಷೆ ನಡೆಸಲಾಯಿತು ಎಂದು ತಿಳಿಸಿದರು.
ವರದಿಗೆ ದತ್ತಾಂಶ ಲಭ್ಯ
1992ರಲ್ಲಿ ಇಂದಿರಾ ಸಾಹಾನಿ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಮಂಡಲ್ ಸಮಿತಿ ವರದಿಗೆ ದತ್ತಾಂಶ ಏನು ಎಂದು ಸ್ಪಷ್ಟವಾಗಿ ಪ್ರಶ್ನಿಸಿತ್ತು. ಈಗ ಕರ್ನಾಟಕ, ಬಿಹಾರ, ತೆಲಂಗಾಣದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.