ಫೋನ್ ಮಾಡಿ ಶಿವಣ್ಣ ಆರೋಗ್ಯ ವಿಚಾರಿಸಿದ ಸಿಎಂ

Public TV
2 Min Read
shivanna 1 6

ಟ ಶಿವಣ್ಣಗೆ (Shivarajkumar) ಇಂದು (ಡಿ.24) ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ನಡೆಯಲಿರುವ ಹಿನ್ನೆಲೆ ನಟನಿಗೆ ಕರೆ ಮಾಡಿ ಸಿಎಂ ಸಿದ್ದರಾಮಯ್ಯ (CM Siddaramaiah) ಆರೋಗ್ಯ ವಿಚಾರಿಸಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಟ ಶಿವರಾಜ್‌ಕುಮಾರ್‌ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ – ಮಲೆ ಮಹದೇಶ್ವರ ಮೊರೆಹೋದ ಫ್ಯಾನ್ಸ್

shivarajkumar

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್‌ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವಣ್ಣ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್‌ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್‌ಕುಮಾರ್ ಅವರ ಜೊತೆಗಿದ್ದು, ಅವರನ್ನು ಕಾಪಾಡಲಿದೆ ಎಂದು ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.

shivarajkumar

ಅಂದಹಾಗೆ, ಮಿಯಾಮಿ ಕ್ಯಾನ್ಸರ್ ಇನಿಸ್ಟಿಟ್ಯೂಟ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಲಿರುವ ಶಿವರಾಜ್‌ಕುಮಾರ್‌ಗೆ ಅಲ್ಲಿ ಭಾರತ ಮೂಲದ ಮುರುಗೇಶ್ ನೇತೃತ್ವದ ತಜ್ಞವೈದ್ಯರ ತಂಡದಿಂದ ಚಿಕಿತ್ಸೆ ನಡೆಯಲಿದೆ. ಮಿಯಾಮಿ ಕ್ಯಾನ್ಸರ್ ಇನಿಸ್ಟಿಟ್ಯೂಟ್ ನೆಕ್ಸ್ಟ್ ಜನರೇಶನ್ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆಯಾಗಿದ್ದು, ವೈದ್ಯಕೀಯ ಆರೈಕೆ, ಸಂಶೋಧನೆ, ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಹೆಸರುವಾಸಿಯಾಗಿದೆ.

ವಿಶ್ವಮಾನ್ಯತೆ ಪಡೆದ ಆಂಕೋಲಾಜಿಸ್ಟ್‌ಗಳೆಂದು ಕರೆಯಲಾಗುವ ತಜ್ಞ ವೈದ್ಯರ ತಂಡ ಇದೆ. ಇವರು ಜಗತ್ತಿನ ಉನ್ನತ ಕ್ಯಾನ್ಸರ್ ಕೇಂದ್ರಗಳಿಂದ ನೇಮಕಗೊಂಡ ವೈದ್ಯರುಗಳಾಗಿದ್ದು, ಇಲ್ಲಿ ಶಸ್ತ್ರಚಿಕಿತ್ಸೆಯಿಂದ ಗುಣವಾಗುವ ಪ್ರಮಾಣ ಹೆಚ್ಚಿದೆ. ಈ ಕಾರಣಕ್ಕೆ ಹಲವು ದೇಶಗಳಿಂದ ಚಿಕಿತ್ಸೆಗೆ ಇಲ್ಲಿಗೆ ಆಗಮಿಸುತ್ತಿದ್ದಾರೆ. ಅತ್ಯಾಧುನಿಕ ಸುಧಾರಿತ ಲೇಸರ್ ತಂತ್ರಜ್ಞಾನ ಒಂದೇ ಸ್ಥಳದಲ್ಲಿ ಲಭ್ಯವಿದ್ದು ಪ್ರತಿಯೊಂದು ವಿಧದ ಕ್ಯಾನ್ಸರ್ ಚಿಕಿತ್ಸೆಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಕಾರಣಕ್ಕೆ ಶಿವರಾಜ್‌ಕುಮಾರ್ ಭರ್ತಿ ಒಂದು ತಿಂಗಳುಗಳ ಕಾಲ ಅಲ್ಲೇ ಚಿಕಿತ್ಸೆ ಪಡೆದು ಸ್ವದೇಶಕ್ಕೆ ಮರಳಲಿದ್ದಾರೆ.

Share This Article