-ಸೂಸೂತ್ರವಾಗಿ ಶಿಷ್ಟಾಚಾರದಂತೆ ಕಾರ್ಯಕ್ರಮ ನಿರ್ವಹಿಸಲು ಸೂಚನೆ
ವಿಜಯಪುರ: ಜನವರಿ 9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಎಲ್ಲಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ಸುಸೂತ್ರವಾಗಿ ನಿರ್ವಹಿಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ್ (M B Patil) ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆಯ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು, ಕಾರ್ಯಕ್ರಮಗಳನ್ನು ಕೈಗೊಂಡಿರುವ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಮುಂಜಾಗ್ರತೆ ವಹಿಸಬೇಕೆಂದು ಸೂಚಿಸಿದರು. ಇದನ್ನೂ ಓದಿ: ಚಿತ್ರದುರ್ಗ| ಮರಕ್ಕೆ ಬೊಲೆರೊ ಡಿಕ್ಕಿ – ನಾಲ್ವರು ದುರ್ಮರಣ
ಜ.9ರಂದು ಮುಖ್ಯಮಂತ್ರಿಗಳು ಆಗಮಿಸಿ, ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಪ್ರಜಾಸೌಧ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಗರದ ದರ್ಬಾರ ಶಾಲಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಕಾರ್ಯಕ್ರಮವನ್ನು ಆಯೋಜಿಸಿ, ಯಶಸ್ವಿಯಾಗಿ ನಿರ್ವಹಿಸಬೇಕು ವೇದಿಕೆ ನಿರ್ವಹಣೆ, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ ಮಾತನಾಡಿ, ಈಗಾಗಲೇ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಸಕಾಲದಲ್ಲಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜನಪ್ರತಿನಿಧಿಗಳು ಭಾಗವಹಿಸುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ವೈದ್ಯರನ್ನು ಹಾಗೂ ಸಿಬ್ಬಂದಿ ಇರುವಂತೆ, ಅಗ್ನಿಶಾಮಕ ವಾಹನ ಸೇರಿದಂತೆ ಸಂಬಂಧಿಸಿದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳು ತಮಗೆ ವಹಿಸಿದ ಯಾವುದೇ ಜವಾಬ್ದಾರಿಯನ್ನು ಲೋಪವಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ ಶಂಕುಸ್ಥಾಪನಾ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಎಲ್ಲ 24 ಪಶು ವೈದ್ಯಕೀಯ ಸೀಟೂ ಹಂಚಿಕೆ: ಕೆಇಎ

