16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ಇಂದು (ಮಾ.1) ವಿಧಾನಸೌಧದ ಆವರಣದಲ್ಲಿ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ, ನಟ ಶಿವರಾಜ್‌ಕುಮಾರ್ ಚಲನಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದರು.
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು (16th Bengaluru Film Festival) ಇಂದಿನಿಂದ 8 ದಿನಗಳ ಕಾಲ ನಡೆಯಲಿದೆ. 60ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ದೇಶ- ವಿದೇಶಗಳ ಸಿನಿಮಾ ಪ್ರದರ್ಶನ ಕಾಣಲಿದೆ. ಇದನ್ನೂ ಓದಿ:ಅಮಲಾ ಪೌಲ್ ಪ್ಯಾಂಟ್‌ಲೆಸ್ ಫೋಟೋಶೂಟ್ ನೋಡಿ ಕಾಲೆಳೆದ ನೆಟ್ಟಿಗರು
ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ನಟ ಶಿವರಾಜ್ ಕುಮಾರ್, ರಾಯಭಾರಿ ಕಿಶೋರ್ ಕುಮಾರ್, MLC ನಜೀರ್ ಅಹಮದ್, ಗೋವಿಂದ್ ರಾಜ್, ಶಾಸಕರಾದ ರಿಜ್ವಾನ್ ಅರ್ಷದ್, ಸಲೀಂ ಅಹಮದ್, ಉಮಾಶ್ರೀ, ಸೌತ್ ನಟಿ ಪ್ರಿಯಾಂಕಾ ಮೋಹನ್ ಭಾಗಿಯಾಗಿದ್ದರು.