ಹಾವೇರಿ: ಕನಕ ಜಯಂತ್ಯೋತ್ಸವ (Kanaka Jayanthi) ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಹಾವೇರಿ (Haveri) ಜಿಲ್ಲೆಗೆ ಭೇಟಿ ನೀಡಲಿದ್ದು, ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ.
ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಯತ್ತ (Hubballi) ಸಿಎಂ ತೆರಳಲಿದ್ದು, ಹುಬ್ಬಳ್ಳಿಯಿಂದ 12:10ಕ್ಕೆ ಕಾಗಿನೆಲೆ (Kaginele) ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ನಂತರ 1:45ಕ್ಕೆ 536ನೇ ಕನಕ ಜಯಂತ್ಯೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 2 ಗಂಟೆಗೆ ಕದರಮಂಡಲಗಿ ಗ್ರಾಮದ ನೂತನ ಶಾಲಾ ಕಟ್ಟಡ ಉದ್ಘಾಟನೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಸುಮಾರು 3:30ಕ್ಕೆ ರಸ್ತೆ ಮಾರ್ಗವಾಗಿ ಕದರಮಂಡಲಗಿಯಿಂದ ಕಾಗಿನೆಲೆ ಹೆಲಿಪ್ಯಾಡ್ ಮೂಲಕ ಹುಬ್ಬಳ್ಳಿಯತ್ತ ತೆರಳಲಿದ್ದು, ಸಂಜೆ 4:45ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಸಿಎಂ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರ ದುರ್ಮರಣ
Advertisement
Advertisement
ಕಾಗಿನೆಲೆಗೆ ಸಿಎಂ ಭೇಟಿ ಹಿನ್ನೆಲೆ ಕಾಗಿನಲೆ ಗ್ರಾಮದಲ್ಲಿ ಫುಲ್ ಟೈಟ್ ಸೆಕ್ಯೂರಿಟಿ ನಿಯೋಜಿಸಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕನಕ ಜಯಂತ್ಯೋತ್ಸವ ಉದ್ಘಾಟನೆ ಮಾಡಲಿದ್ದು, ಕನಕದಾಸರ ನೆಲದಲ್ಲಿ ಬೃಹತ್ ಕನಕ ವೇದಿಕೆ ಸಜ್ಜಾಗಿದೆ. ವೇದಿಕೆ ಮುಂಭಾಗದಲ್ಲಿ ಸಾವಿರಾರು ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಅದ್ಧೂರಿ ಕನಕ ಜಯಂತ್ಯೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಅಹಿತಕರ ನಡೆಯದಂತೆ ಖಾಕಿ ಸರ್ಪಗಾವಲನ್ನು ನಿಯೋಜಿಸಲಾಗಿದ್ದು, ಜಿಲ್ಲಾಡಳಿತದಿಂದ 700ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಭ್ರೂಣ ಪತ್ತೆ, ಹತ್ಯೆ ಪ್ರಕರಣ- ಆಲೆಮನೆ ಮಾಲೀಕನಿಂದ ಆಶಾ ಕಾರ್ಯಕರ್ತೆಗೆ ಬೆದರಿಕೆ
Advertisement