Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ

Bengaluru City

ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ

Public TV
Last updated: October 8, 2024 6:13 pm
Public TV
Share
6 Min Read
Siddaramaiah 7
SHARE

ಬೆಂಗಳೂರು: ಜಾತಿಗಣತಿ ವರದಿ ಅನುಷ್ಠಾನ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದ್ದಾರೆ. ಜಾತಿಗಣತಿ ಸಂಬಂಧ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ (CM Siddaramaiah) ತಿರುಗೇಟು ನೀಡಿದ್ದಾರೆ.

ಸಿಎಂ ಟ್ವೀಟ್ ಏನು?
ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ (BJP) ಯಾವ ತಕರಾರು-ವಿರೋಧ ಇಲ್ಲ. ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿರೋಧಪಕ್ಷದ ನಾಯಕರಾದ ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು. ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ಇದನ್ನೂ ಓದಿ: Jammu Kashmir Election Results| ಉಗ್ರರಿಂದ ಹತ್ಯೆಯಾಗಿದ್ದ ವ್ಯಕ್ತಿಯ ಮಗಳಿಗೆ ಒಲಿದ ಜಯ

“ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕರಾದ @RAshokaBJP ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು.

ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು… https://t.co/pK3f6iButy

— CM of Karnataka (@CMofKarnataka) October 8, 2024

ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ ʻಅಂತ್ಯೋದಯʼ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ. 2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿ ಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ್ಳದೆ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳು ಇರಲಿಲ್ಲ.

2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ‍್ಳದೆ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳು ಇರಲಿಲ್ಲ. ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರ್ಕಾರ ಕೂಡಾ ಬದ್ಧವಾಗಿದೆ.…

— CM of Karnataka (@CMofKarnataka) October 8, 2024

ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರ್ಕಾರ ಕೂಡಾ ಬದ್ಧವಾಗಿದೆ. ಅಶೋಕ್ (R Ashok) ಅವರೇ, ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿಯನ್ನು ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿರೋಧ ಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ. ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ, ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು. ಇದನ್ನೂ ಓದಿ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ – ಖಾತೆ ತೆರೆದ ಎಎಪಿ; ಬಿಜೆಪಿ ಅಭ್ಯರ್ಥಿ ವಿರುದ್ಧ ಮಲಿಕ್‌ ಜಯಭೇರಿ

ಕಾಂತರಾಜ್ ಆಯೋಗ ನಡೆಸಿದ್ದ ಜಾತಿಗಣತಿಯ ವರದಿ ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ನಾನು ಕೂಡಾ ಅದನ್ನು ಓದಿಲ್ಲ. ಹೀಗಿರುವಾಗ ಅಶೋಕ್ ಅವರು ವರದಿ ಬಿಡುಗಡೆಯಾಗುವ ಮೊದಲೇ ಅದು ವೈಜ್ಞಾನಿಕವಾಗಿ ನಡೆದಿಲ್ಲ. ಅದರಲ್ಲಿ ತಪ್ಪುಗಳಿವೆ ಎಂದು ಆರೋಪಿಸುತ್ತಿದ್ದಾರೆ. ವರದಿ ಅವರಲ್ಲಿದೆಯೇ? ಯಾವ ಆಧಾರದಲ್ಲಿ ಅವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು.

ಕಾಂತರಾಜ್ ಆಯೋಗ ನಡೆಸಿದ್ದ ಜಾತಿಗಣತಿಯ ವರದಿ ಇಲ್ಲಿಯ ವರೆಗೆ ಬಿಡುಗಡೆಯಾಗಿಲ್ಲ. ನಾನು ಕೂಡಾ ಅದನ್ನು ಓದಿಲ್ಲ. ಹೀಗಿರುವಾಗ @RAshokaBJP ಅವರು ವರದಿ ಬಿಡುಗಡೆಯಾಗುವ ಮೊದಲೇ ಅದು ವೈಜ್ಞಾನಿಕವಾಗಿ ನಡೆದಿಲ್ಲ, ಅದರಲ್ಲಿ ತಪ್ಪುಗಳಿವೆ ಎಂದು ಆರೋಪಿಸುತ್ತಿದ್ದಾರೆ. ವರದಿ ಅವರಲ್ಲಿದೆಯೇ? ಯಾವ ಆಧಾರದಲ್ಲಿ ಅವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ…

— CM of Karnataka (@CMofKarnataka) October 8, 2024

ಈಗ ಏಕಾಏಕಿಯಾಗಿ ವರದಿಯನ್ನು ಬಿಡುಗಡೆಗೊಳಿಸುವ ನಿರ್ಧಾರ ಯಾಕೆ ಎಂದು ಅಶೋಕ್ ಕೇಳುತ್ತಿದ್ದಾರೆ. ಇದೇನು ದಿಢೀರ್ ನಿರ್ಧಾರ ಅಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಇದರ ಬಗ್ಗೆ ಸಮಾಲೋಚನೆ ನಡೆಸುತ್ತಾ ಬಂದಿದ್ದೇವೆ. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಉಳ್ಳವರು. ಯಾವುದೇ ಚರ್ಚೆ-ಸಂವಾದ ಇಲ್ಲದೆ ದಿಡೀರ್ ನಿರ್ಧಾರ ಕೈಗೊಳ್ಳುವ ಸರ್ವಾಧಿಕಾರಿ ಧೋರಣೆ ನಮ್ಮದ್ದಲ್ಲ. ಸಾರ್ವಜನಿಕ ತೀರ್ಮಾನಗಳನ್ನು ಸಹಮತ ಮೂಡಿಸುವ ಮೂಲಕ ಕೈಗೊಳ್ಳಬೇಕೆಂಬ ಅಭಿಪ್ರಾಯ ನಮ್ಮದಾಗಿದೆ. ಇದರಿಂದಾಗಿ ಸ್ವಲ್ಪ ವಿಳಂಬವಾಗಿದೆ ಅಷ್ಟೆ.

ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರು ಮತ್ತು ಹಿಂದುಳಿದವರಿಗೆ ಮಾಡುವ ಅವಮಾನವಲ್ಲವೇ ಎಂದು ಅಶೋಕ್ ಅವರು ಅಮಾಯಕರಂತೆ ಪ್ರಶ್ನಿಸಿದ್ದಾರೆ. ಸನ್ಮಾನ್ಯ ಅಶೋಕ್ ಅವರೇ, ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ. ಇದು ಕೇವಲ ಜಾತಿ ಜನಗಣತಿ ಅಲ್ಲ. ಇದು ಸರ್ವರ ಒಳಿತಿಗಾಗಿ ನಡೆಸಲಾದ ರಾಜ್ಯದ ಏಳು ಕೋಟಿ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದನ್ನು ಇಲ್ಲಿಯವರೆಗೆ ದಲಿತರಾಗಲಿ, ಹಿಂದುಳಿದ ಜಾತಿಯವರಾಗಲಿ ವಿರೋಧಿಸಿಲ್ಲ. ಹೀಗಿರುವಾಗ ಅವರಿಗೆ ಅವಮಾನವಾಗಿದೆ ಎಂದು ಹೇಗೆ ಹೇಳುತ್ತೀರಿ? ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ, ಜನರ ತೀರ್ಪನ್ನು ಒಪ್ಪಿಕೊಳ್ತೀವಿ: ಡಿಸಿಎಂ ಡಿ.ಕೆ.ಶಿವಕುಮಾರ್

ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರು ಮತ್ತು ಹಿಂದುಳಿದವರಿಗೆ ಮಾಡುವ ಅವಮಾನವಲ್ಲವೇ ಎಂದು @RAshokaBJP ಅವರು ಅಮಾಯಕರಂತೆ ಪ್ರಶ್ನಿಸಿದ್ದಾರೆ.
ಸನ್ಮಾನ್ಯ ಅಶೋಕ್ ಅವರೇ, ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ, ಇದು ಕೇವಲ ಜಾತಿ ಜನಗಣತಿ ಅಲ್ಲ, ಇದು ಸರ್ವರ ಒಳಿತಿಗಾಗಿ ನಡೆಸಲಾದ ರಾಜ್ಯದ ಏಳು ಕೋಟಿ ಜನತೆಯ ಸಾಮಾಜಿಕ ಮತ್ತು…

— CM of Karnataka (@CMofKarnataka) October 8, 2024

ಜಾತಿ ಜನಗಣತಿ ವಿರುದ್ಧ ತಳ ಸಮುದಾಯಗಳನ್ನು ಎತ್ತಿಕಟ್ಟುವ ಉದ್ದೇಶ ನಿಮ್ಮದಾಗಿದ್ದರೆ ನಿಮಗೆ ನಿರಾಶೆ ಖಚಿತ. ಜಾತಿಗಣತಿ ನನ್ನ ಕನಸಿನ ಕೂಸು ಎಂದು ಹೇಳಲು ಯಾವ ಹಿಂಜರಿಕೆಯೂ ಇಲ್ಲ. 1992ರಲ್ಲಿ ಸುಪ್ರೀಂ ಕೋರ್ಟ್ (Supreme Court) ಮಂಡಲ ವರದಿಗೆ ಸಂಬಂಧಿಸಿದಂತೆ ನೀಡಿದ್ದ ಆದೇಶದಲ್ಲಿ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗವನ್ನು ರಚಿಸಿ, ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿತ್ತು. ಇದರಂತೆ 1995ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಜಾತಿಗಳ ಆಯೋಗವನ್ನು ರಚಿಸಿದ್ದೆ. 2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಆದೇಶ ನೀಡಿದ್ದೆ. ಇದು ದೇಶದಲ್ಲಿಯೇ ಪ್ರಥಮ ಪ್ರಯತ್ನ ಎಂದು ಹೇಳಲು ನನಗೆ ಹೆಮ್ಮೆಯಿದೆ. ಇದನ್ನೂ ಓದಿ: Haryana Results| ಕಾಂಗ್ರೆಸ್‌ ಸೋತಿದ್ದು ಹೇಗೆ? – ಇಲ್ಲಿದೆ 6 ಕಾರಣಗಳು

ಜಾತಿಗಣತಿ ಬಗ್ಗೆ ನನ್ನ ಬದ್ಧತೆಯನ್ನು ಪ್ರಶ್ನಿಸುತ್ತಿರುವ ಅಶೋಕ್ ಅವರು, ತಮ್ಮ ಪಕ್ಷ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿಯೂ ಜಾತಿಗಣತಿ ನಡೆಸುವ ಧೈರ್ಯವನ್ನು ಯಾಕೆ ಮಾಡಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಜಾತಿಗಣತಿ ನಡೆಸುವುದನ್ನು ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಸೇರಿಸಿದೆ. ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೆ ಮತ್ತೆ ಅದನ್ನು ಒತ್ತಿ ಒತ್ತಿ ಹೇಳುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಜಾತಿಗಣತಿ ಬಗ್ಗೆ ತಕರಾರು ಇಲ್ಲದೆ ಇದ್ದರೆ ಪಕ್ಷದ ನಾಯಕರು ಯಾಕೆ ಇದಕ್ಕೆ ಸಹಮತ ವ್ಯಕ್ತಪಡಿಸದೆ ಅವರನ್ನು ಟೀಕಿಸುತ್ತಿದ್ದಾರೆ. ಮೀಸಲಾತಿ ಬಗ್ಗೆಯಾಗಲಿ, ಒಟ್ಟು ಸಾಮಾಜಿಕ ನ್ಯಾಯದ ಬಗ್ಗೆಯಾಗಲಿ ಭಾರತೀಯ ಜನತಾ ಪಕ್ಷ ಮತ್ತು ಆರ್‌ಎಸ್‌ಎಸ್ ನಿಲುವು ಏನು ಎನ್ನುವುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ. ನೀವು ಯಾವ ವೇಷ ಧರಿಸಿ ಬಣ್ಣ ಬಳಿದುಕೊಂಡು ಮಾತನಾಡಿದರೂ ನಿಮ್ಮ ಆಂತರ್ಯದ ಅಭಿಪ್ರಾಯ ಏನೆಂಬುದು ಜನರಿಗೆ ತಿಳಿದಿದೆ. ಇದನ್ನೂ ಓದಿ: ಬಿಎಂಟಿಸಿ ಬಸ್‌ಗೆ ಬೈಕ್‌ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು

ಜಾತಿ ಗಣತಿ ಬಗ್ಗೆ ನನ್ನ ಬದ್ಧತೆಯನ್ನು ಪ್ರಶ್ನಿಸುತ್ತಿರುವ @RAshokaBJP ಅವರು, ತಮ್ಮ ಪಕ್ಷ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿಯೂ ಜಾತಿಗಣತಿ ನಡೆಸುವ ಧೈರ್ಯವನ್ನು ಯಾಕೆ ಮಾಡಿಲ್ಲ? ಎನ್ನುವ ಪ್ರಶ್ನೆಗೆ ಉತ್ತರಿಸಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಜಾತಿಗಣತಿ ನಡೆಸುವುದನ್ನು ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಸೇರಿಸಿದೆ. ನಮ್ಮ…

— CM of Karnataka (@CMofKarnataka) October 8, 2024

ಜಾತಿಗಣತಿ ಬಗ್ಗೆ ತಕರಾರು ಇಲ್ಲ ಎಂದು ಹೇಳುತ್ತಿರುವ ಅಶೋಕ್ ಅವರೇ, ನೀವು ಇದೇ ಮಾತನ್ನು ಪ್ರಧಾನಿ ಮೋದಿ ಅವರಿಗೆ ಹೇಳಿ. ರಾಷ್ಟ್ರಮಟ್ಟದಲ್ಲಿ ಜನಗಣತಿಯ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವಂತೆ ಒತ್ತಡ ಹೇರಿ. ನಿಮ್ಮ ಬದ್ಧತೆ ಮತ್ತು ಸತ್ಯಸಂಧತೆಯನ್ನು ಸಾಬೀತುಪಡಿಸಿ. ಇಲ್ಲದೆ ಇದ್ದರೆ ನೀವು ಕೂಡಾ ಇತ್ತೀಚೆಗೆ ನಿಮ್ಮ ಮೇಲೆ ಬಂದಿರುವ ಆರೋಪಗಳಿಂದ ತಪ್ಪಿಸಿಕೊಳ್ಳಲು ವಿನಾಕಾರಣ ಜಾತಿ ಜನಗಣತಿಯ ವಿವಾದವನ್ನು ಪ್ರಸ್ತಾಪಿಸುತ್ತಿದ್ದೀರಿ ಎಂದು ಆರೋಪಿಸಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಅಶೋಕ್‌ಗೆ ಸಿಎಂ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ನಟ ಶ್ರೀಮುರಳಿ

ಜಾತಿ ಗಣತಿ ಬಗ್ಗೆ ತಕರಾರು ಇಲ್ಲ ಎಂದು ಹೇಳುತ್ತಿರುವ @RAshokaBJP ಅವರೇ, ನೀವು ಇದೇ ಮಾತನ್ನು ಪ್ರಧಾನಿ @narendramodi ಅವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ಜನಗಣತಿಯ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವಂತೆ ಒತ್ತಡ ಹೇರಿ, ನಿಮ್ಮ ಬದ್ದತೆ ಮತ್ತು ಸತ್ಯಸಂಧತೆಯನ್ನು ಸಾಬೀತುಪಡಿಸಿ. ಇಲ್ಲದೆ ಇದ್ದರೆ ನೀವು ಕೂಡಾ ಇತ್ತೀಚೆಗೆ ನಿಮ್ಮ ಮೇಲೆ…

— CM of Karnataka (@CMofKarnataka) October 8, 2024

TAGGED:bengalurubjpcm siddaramaiahcongressnarendra modir ashokಆರ್ ಅಶೋಕ್ಜಾತಿಗಣತಿಪ್ರಧಾನಿ ಮೋದಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
27 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
28 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
46 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
2 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
2 hours ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?