ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಬೀದರ್ (Bidar) ಪ್ರವಾಸ ಕೈಗೊಂಡಿದ್ದು, ಶತಾಯುಷಿ ಡಾ. ಭೀಮಣ್ಣ ಖಂಡ್ರೆಯವರ (Bheemanna Khandre) ಶತಮಾನೋತ್ಸವ ಹಾಗೂ ಲೋಕನಾಯಕ ಭೀಮಣ್ಣ ಖಂಡ್ರೆ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಂದು ಭಾಲ್ಕಿ (Bhalki) ಸಾಕ್ಷಿಯಾಗಲಿದೆ.
ಈ ಅಭಿನಂದನಾ ಗ್ರಂಥವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾಲ್ಕಿ ಬಿಕೆಐಟಿ ಕಾಲೇಜು ಆವರಣದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಾಗಿದೆ. ಮಠಾಧೀಶರು, ಜನಪ್ರತಿನಿಧಿಗಳು, ಗಣ್ಯರಿಗೆ ಬೃಹತ್ ವೇದಿಕೆ ಮೇಲೆ 300 ಆಸನದ ವ್ಯವಸ್ಥೆ ಮಾಡಿದ್ದು, ಜನರಿಗಾಗಿ ಒಂದು ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ನೀನು ಎಷ್ಟು ಟ್ಯಾಕ್ಸ್ ಕಟ್ತೀಯಾ ಹೇಳು – ರೈತನ ವಿರುದ್ಧ ಸುರೇಶ್ ಗರಂ
Advertisement
Advertisement
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ವೀರಪ್ಪ ಮೊಯ್ಲಿ, ಸಚಿವ ಸಂಪುಟದ ಸಚಿವರು, ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀಗಳು, ಸಿರಿಗೆರಿ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ಹೈದರಾಬಾದ್‌ಗೆ ತೆರಳಲಿದ್ದಾರೆ ಟ್ರಬಲ್ ಶೂಟರ್ ಡಿಕೆಶಿ
Advertisement