ಬೆಳಗಾವಿ: ಸಿಎಂ ಸಿದ್ದರಾಮಯ್ಯ (Siddaramaiah) ಇಂದು (ಭಾನುವಾರ) ಶಕ್ತಿ ಪೀಠಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ದೇಗುಲಕ್ಕೆ (Savadatti Yallamma Temple) ಭೇಟಿ ನೀಡಿ ದರ್ಶನ ಪಡೆದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಯಲ್ಲಮ್ಮ ಗುಡ್ಡಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಾದ್ಯ ಮೇಳಗಳೊಂದಿಗೆ ಸ್ವಾಗತಿಸಲಾಯಿತು. ಮಂತ್ರ ಘೋಷಗಳೊಂದಿಗೆ ದೇವಿಯ ದರ್ಶನಕ್ಕೆ ಅರ್ಚಕರು ಆಹ್ವಾನಿಸಿದರು. ಇದೇ ವೇಳೆ ದೇವಸ್ಥಾನದ ಅರ್ಚಕ ಕೊಟ್ಟ ಎರಡು ನಿಂಬೆ ಹಣ್ಣುಗಳನ್ನು ಕೈಯಲ್ಲಿ ಹಿಡಿದುಕೊಂಡು ದೇವಸ್ಥಾನ ಪ್ರವೇಶಿಸಿದ ಸಿದ್ದರಾಮಯ್ಯ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನ ರಕ್ಷಣೆ
Advertisement
Advertisement
ಈ ವೇಳೆ ಅರ್ಚಕರು ಅವರ ಹೆಸರಲ್ಲಿ ಪೂಜೆ ಸಲ್ಲಿಸಿ, ತಿಲಕ ಇಟ್ಟು, ಮಂಗಳಾರತಿ ನೀಡಿ, ನಾಗಮೂರ್ತಿ ದೇವಿಯ ಬೆಳ್ಳಿ ಕಿರೀಟವನ್ನು ಸಿದ್ದರಾಮಯ್ಯ ಅವರ ತಲೆಗೆ ಮುಟ್ಟಿಸಿ ಆಶೀರ್ವಾದ ಮಾಡಿದರು. ದೇವಿಯ ಆರತಿ ಆಗುವವರೆಗೂ ದೇವಿ ಸನ್ನಿಧಾನದಲ್ಲಿ ನಿಂತು ದರ್ಶನ ಪಡೆದ ಸಿಎಂ, ತಾವೇ ಕುಂಕುಮ ಹಚ್ಚಿಕೊಂಡರು. ಬಳಿಕ 500 ರೂ. ಆರತಿ ತಟ್ಟೆಗೆ ಹಾಕಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದು ಸಿಎಂ ಭಯೋತ್ಪಾದಕರ ಬೆಂಬಲಿಗ: ಜೋಶಿ ವಾಗ್ದಾಳಿ
Advertisement
ದೇವಿ ಮುಂದೆ 10 ನಿಮಿಷ ಕುಳಿತು ಡಿಸಿಎಂ ಡಿ.ಕೆ.ಶಿವಕುಮಾರ ಪ್ರಾರ್ಥಿಸಿದರು. ದೇವಸ್ಥಾನದ ಹೊರಗೆ ಡಿಕೆಶಿ ಬರುವವರೆಗೆ ಸಿಎಂ ಸಿದ್ದರಾಮಯ್ಯ ಕಾದು ನಿಂತಿದ್ದರು. ಈ ವೇಳೆ ಸಚಿವರಾದ ಹೆಚ್.ಕೆ.ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ವಿಶ್ವಾಸ್ ವೈದ್ಯ, ಬಾಬಾಸಾಹೇಬ ಪಾಟೀಲ್, ಭರಮಗೌಡ ಕಾಗೆ, ಆಸೀಫ್ ಸೇಠ್, ಎನ್.ಹೆಚ್.ಕೋನರೆಡ್ಡಿ, ಚನ್ನರಾಜ ಹಟ್ಟಿಹೊಳಿ ಸೇರಿ ಮತ್ತಿತರರು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ಕೊಟ್ಟರು. ಇದನ್ನೂ ಓದಿ: ಒಳಮೀಸಲಾತಿಗೆ ಕಾಂಗ್ರೆಸ್ ಮಾತ್ರ ಮೀನಾಮೇಷ ಎಣಿಸುತ್ತಿದೆ – ಆರ್.ಅಶೋಕ್
Advertisement
ದೇವಿ ದರ್ಶನ ಪಡೆದು ವಾಪಸ್ ಆಗುವಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಸವದತ್ತಿ ಯಲ್ಲಮ್ಮ ದೇವಿಯ ಅರ್ಚಕ ರಾಜ್ಯದಲ್ಲಿರುವ ಅರ್ಚಕರ ವೇತನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು. ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಿ ವೇತನ ಬಿಡುಗಡೆ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು. ಇದನ್ನೂ ಓದಿ: ಶಾಸಕ ಶಿವಲಿಂಗೇಗೌಡಗೆ ಗ್ರಾಮಸ್ಥರಿಂದ ಘೇರಾವ್