ಚಿಕ್ಕಬಳ್ಳಾಪುರ: ಚುನಾವಣಾ ದಿನಾಂಕ ಘೋಷಣೆ ಆಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಿಗದಿಯಾಗಿದ್ದ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿದ್ದ ಹಿನ್ನೆಲೆಯಲ್ಲಿ ಸಿಎಂ ಖಾಸಗಿ ಕಾರಿನಲ್ಲಿ ಪ್ರಯಾಣಿಸಿದರು.
ಚಿಕ್ಕಬಳ್ಳಾಪುರ ನಗರದ ನಂದಿ ಕ್ರಾಸ್ ಬಳಿ ನಿರ್ಮಾಣವಾಗಿರುವ ಕೋಚಿಮುಲ್ ಮೆಗಾಡೈರಿ ಉದ್ಘಾಟನೆಗೆ ಸಿಎಂ ಆಗಮಿಸಿದ್ದರು. ರಾಜ್ಯ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಆದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮ ಹಾಗೂ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮ ರದ್ದಾಗಿದೆ. ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಉದ್ಘಾಟನೆ ಮಾಡದೆ ಮೆಗಾಡೈರಿ ವೀಕ್ಷಿಸಿ ನಂತರ ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು.
Advertisement
Advertisement
ಮೆಗಾಡೈರಿ ಉದ್ಘಾಟನೆ ರದ್ದುಗೊಳಿಸಿ ನಂತರ ಮಾಧ್ಯಮಗಳ ಹತ್ತಿರ ಮಾತನಾಡಿದ ಸಿದ್ಧರಾಮಯ್ಯ, ನೀತಿ ಸಂಹಿತೆ ಜಾರಿಗೆ ಬರಲ್ಲ. ನೋಟಿಫಿಕೇಷನ್ ಆದ ನಂತರ ಅಧಿಕೃತವಾಗಿ ಜಾರಿಗೆ ಬರುತ್ತೆ. ಆದರೆ ಆಯೋಗಕ್ಕೆ ಗೌರವ ಕೊಟ್ಟು ಉದ್ಘಾಟನೆ ಬದಲು ವೀಕ್ಷಣೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
Advertisement
Advertisement
ಅಷ್ಟೇ ಅಲ್ಲದೇ ಬಿಜೆಪಿಯವರು ಹತಾಶರಾಗಿ ಏನೇನೋ ಮಾತಾಡುತ್ತಿದ್ದಾರೆ. ಈ ಬಾರಿಯೂ ನಾವೇ ಬಹುಮತದಿಂದ ಗೆದ್ದೇ ಬರಲಿದ್ದೇವೆ. ಜೆಡಿಎಸ್, ಬಿಜೆಪಿ ಜೊತೆ ಸಂಬಂಧ ಇಟ್ಟುಕೊಂಡಿದೆ. ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೆ ಎಂದು ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿ ಆಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ತಮ್ಮ ಫೇಸ್‍ಬುಕ್ ಕವರ್ ಫೋಟೋ ಹಾಗೂ ಪ್ರೊಫೈಲ್ ಫೋಟೋವನ್ನು ಬದಲಾಯಿಸಿಕೊಂಡಿದ್ದಾರೆ.