ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯುವ ಕ್ರಿಕೆಟ್ ಪಂದ್ಯಗಳಿಗೆ ಆಗಾಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ವಿಸಿಟ್ ಕೊಟ್ಟು ತಮಗೂ ಕ್ರಿಕೆಟ್ ಕ್ರೇಜ್ ಇದೇ ಎಂಬುದನ್ನು ಸಾಬೀತು ಮಾಡಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ – ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಿದರು. #ICCCricketWorldCup #AUSvPAK pic.twitter.com/zKTCjqsBNA
— CM of Karnataka (@CMofKarnataka) October 20, 2023
Advertisement
2023 ಐಪಿಎಲ್ ಟೂರ್ನಿ ವೇಳೆ ಆರ್‌ಸಿಬಿ ಮ್ಯಾಚ್ ವೀಕ್ಷಣೆ ಮಾಡಿದ್ದ ಸಿಎಂ, ಶುಕ್ರವಾರ (ಅ.20) ಕ್ರಿಕೆಟ್ ಅಭಿಮಾನಿಗಳೊಂದಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ. ಸಿಎಂ ಜೊತೆಗೆ ವಿಐಪಿ ವಿಂಗ್‌ನಲ್ಲಿ ಕುಳಿತು ಸಚಿವ ಬೈರತಿ ಸುರೇಶ್, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಕ್ರಿಕೆಟ್ ವೀಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: IPL 2023: RCB ನನ್ನ ಹೆಮ್ಮೆಯ ತಂಡ – ಇಂದಲ್ಲ ನಾಳೆ ಕಪ್ ನಮ್ದೆ ಎಂದ ಸಿದ್ದರಾಮಯ್ಯ
Advertisement
Advertisement
2023 ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೆಂಗಳೂರಿನಲ್ಲಿ ಒಟ್ಟು 5 ಪಂದ್ಯಗಳು ನಿಗದಿಯಾಗಿದ್ದು, ಸದ್ಯ ಮೊದಲ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾ ತಂಡವ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದೆ. 368 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿರುವ ಪಾಕಿಸ್ತಾನ ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದರೂ 29.4 ಓವರ್‌ಗಳಲ್ಲಿ 196 ರನ್‌ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ. ಇದನ್ನೂ ಓದಿ: World Cup 2023: ದಾಖಲೆ ಸೃಷ್ಟಿಸಿದ ವಾರ್ನರ್, ಮಿಚೆಲ್ ಮಾರ್ಷ್ ಶತಕಗಳ ಜೊತೆಯಾಟ – ಪಾಕ್‌ಗೆ 368 ರನ್‌ಗಳ ಗುರಿ
Advertisement
Web Stories