ಮೈಸೂರು: ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ (Chamundi Hills) ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿದ್ದಾರೆ.
ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಹಾಗೂ ಸೊಸೆ ಸ್ಮಿತಾ ರಾಕೇಶ್ ಅವರು ಒಟ್ಟಿಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಹಿಂಬಾಗಿಲಿನಿಂದ ಪ್ರವೇಶ ಪಡೆದು ತಾಯಿ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಬಳಿಕ ಅದೇ ದಾರಿಯಲ್ಲಿ ನಿರ್ಗಮಿಸಿದ್ದಾರೆ. ಸಿಎಂ ಪತ್ನಿ ಹಾಗೂ ಸೊಸೆಗೆ ಪೊಲೀಸರು ಎಸ್ಕಾರ್ಟ್ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಬಂದರು.ಇದನ್ನೂ ಓದಿ: ಮಗ ಯಾವುದೇ ತಪ್ಪು ಮಾಡಿಲ್ಲ, ನನ್ನನ್ನು ರಾಜಕೀಯವಾಗಿ ಮುಗಿಸಲು ನಮ್ಮ ಮೇಲೆ ಆರೋಪ: ಪ್ರಭು ಚೌಹಾಣ್
ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.
ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ.ಇದನ್ನೂ ಓದಿ: ಕಂಡಕ್ಟರ್ ಯಡವಟ್ಟು, ಹೋಟೆಲ್‍ಗೆ ನುಗ್ಗಿದ ಬಿಎಂಟಿಸಿ ಬಸ್ – ಐವರಿಗೆ ಗಾಯ