ಬೆಂಗಳೂರು: ಮಾರುಕಟ್ಟೆ ದರ ಅಥವಾ 60:40 ನಿಯಮದಡಿ ಬದಲಿ ಮೂಡಾ (MUDA) ಸೈಟ್ ಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ನಿರಾಕರಣೆ ಮಾಡಿರುವ ವಿಚಾರಕ್ಕೆ ಸಿಎಂ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಕಿಡಿಕಾರಿದ್ದಾರೆ. ಮುಡಾ ಸಭೆ ನಡಾವಳಿ ಪ್ರತಿಯನ್ನ ಸಾಮಾಜಿಕ ಜಾಲತಾಣ X ನಲ್ಲಿ ಹಾಕಿ ಸಿದ್ದರಾಮಯ್ಯ ಅವರನ್ನು ಕಟುವಾಗಿ ಟೀಕಿಸಿದ್ದಾರೆ.
ಸನ್ಮಾನ್ಯ ಸಿಎಂ @siddaramaiah ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ.
ನೀವು ಸ್ವಯಂಘೋಷಿತ ವಕೀಲರಲ್ಲವೇ?
ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ.
“50:50ರ… pic.twitter.com/9WC5gRtIGK
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 23, 2024
ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ನವರೇ ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಗಳನ್ನು ಹಾಕಿ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: MUDA Scam| ಜಮೀನಿಗೆ ಮಾರುಕಟ್ಟೆ ದರ ಒಪ್ಪದೇ ಸೈಟ್ ಪಡೆದಿದ್ದ ಸಿಎಂ ಪತ್ನಿ
50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ಒತ್ತಾಯ ಮಾಡಿದ್ದಾರೆ. ಅರ್ಜಿದಾರರಾದ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಅವರು ಪ್ರಶ್ನಿಸಿದ್ದಾರೆ.
ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ರಿ. ಈಗ ಹೇಳಿ ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಾಸಿಕ್ಯೂಷನ್ ವಾರ್ – ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಲು ಮುಂದಾದ ಕಾಂಗ್ರೆಸ್