ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ರಾತ್ರಿ 11:30ರ ವೇಳೆಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದರಿಂದಾಗಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸದ ಸಮಯದಲ್ಲಿ ಬದಲಾವಣೆಯಾಗಿದೆ. ಬೆಳಗ್ಗೆ 9:50ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿದ್ದ ಅವರು ಸ್ವಲ್ಪ ತಡವಾಗಿ ದೆಹಲಿಗೆ ತೆರಳಲಿದ್ದಾರೆ. ಇದನ್ನೂ ಓದಿ: ಕಾರವಾರ ಕಡಲತೀರದಲ್ಲಿ ನೌಕಾದಳ ಸಿಬ್ಬಂದಿಯಿಂದ ಯೋಗ ದಿನಾಚರಣೆ
Advertisement
Advertisement
ಬೆಳಗ್ಗೆ 11:30ಕ್ಕೆ ಹೆಚ್ಎಎಲ್ನ ವಿಶೇಷ ವಿಮಾನದ ಮೂಲಕ ದೆಹಲಿಗೆ (Delhi) ತೆರಳಲಿದ್ದಾರೆ. ತೆರಳುವ ಮುನ್ನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಇದನ್ನೂ ಓದಿ: ನಾನೂ ಸಹ ಮೋದಿಯ ಅಭಿಮಾನಿಯಾಗಿದ್ದೇನೆ: ಎಲಾನ್ ಮಸ್ಕ್