ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಯಯ್ಯ (Siddaramaiah) ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಪ್ರತಿಕ್ರಿಯಿಸಿದ್ದಾರೆ.
ನಗರದ ವಾರ್ಡ್ ನಂಬರ್ 24 ರಲ್ಲಿ ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್
ಬಿಜೆಪಿಯವರು ಹೋರಾಟ ಮಾಡಬೇಕು. ಹಾಗಾಗಿ ಹೋರಾಟ ಮಾಡಲಿ. ಆದರೆ, ಕುಮಾರಸ್ವಾಮಿ, ಯಡಿಯೂರಪ್ಪನವರ ಮೇಲೆ ಎಫ್‌ಐಆರ್ ಆಗಿಲ್ವಾ? ಬೇಲ್ ಮೇಲೆ ಹೊರಗಿಲ್ವಾ? ವಿಜಯೇಂದ್ರ ಮೇಲೆ ಇಲ್ವಾ? ಅವರು ಮೊದಲು ರಾಜೀನಾಮೆ ಕೊಟ್ಟು ಮೇಲ್ಪಂಕ್ತಿ ಹಾಕಿಕೊಡಲಿ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ ಎಂದು ಪ್ರಶ್ನಿಸಿದರು.
ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನ ತುಳಿಯಲು ಪ್ರಯತ್ನ ಮಾಡ್ತಿದ್ದಾರೆ. ಅದನ್ನ ನಾವು ಸಹಿಸಲ್ಲ ಎಂದರು. ಇದನ್ನೂ ಓದಿ: ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ ಬಿಬಿಎಂಪಿಗೆ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿಕೆಶಿ